Home » Mangaluru: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ; 8 ಆರೋಪಿಗಳು ವಶಕ್ಕೆ?

Mangaluru: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ; 8 ಆರೋಪಿಗಳು ವಶಕ್ಕೆ?

0 comments

Mangaluru: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆಗೆ ಕಾಂಟ್ರಾಕ್ಟ್‌ ಕಿಲ್ಲರ್ಸ್‌ ಬಳಸಿ ಈ ದಾಳಿ ಮಾಡಿರುವ ಕುರಿತು ಮಾಹಿತಿಯನ್ನು ಪೊಲೀಸರು ಕಲೆ ಹಾಕಿರುವ ಕುರಿತು ವರದಿಯಾಗಿದೆ.

8 ಆರೋಪಿಗಳ ಪೈಕಿ ಇಬ್ಬರು ಹಿಂದೂ ಯುವಕರು ಎಂದು ಹೇಳಲಾಗುತ್ತಿದೆ. ವಿಡಿಯೋ ಸಾಕ್ಷ್ಯದ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. 8 ಆರೋಪಿಗಳ ವಿಚಾರಣೆ ತೀವ್ರಗೊಂಡಿದ್ದು, ವಶಕ್ಕೆ ಪಡೆದಿರುವ ಕೆಲ ಆರೋಪಿಗಳು ದಕ್ಷಿಣ ಕನ್ನಡದಲ್ಲೇ ಅವಿತು ಕುಳಿತಿದ್ದರು. ಆರೋಪಿಗಳನ್ನು ವಶಕ್ಕೆ ಪಡೆದಿರುವ ಕುರಿತು ಇಂದು ಮಂಗಳೂರು ಕಮಿಷನರ್‌ ಅಧಿಕೃತವಾಗಿ ಸುದ್ದಿಗೋಷ್ಠೀ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಹಿಂದೂ ಕಾರ್ಯಕರ್ತನ ಮೇಲೆ ದಾಳಿ ಮಾಡಲು ಹಿಂದೂ ಯುವಕರನ್ನೇ ಬಳಸಲಾಗಿದೆ ಅನ್ನೋ ಸ್ಫೋಟಕ ಮಾಹಿತಿ ಬಯಲಾಗಿದೆ. ಚಿಕ್ಕಮಗಳೂರಿನ ಕಳಸ ಮೂಲದ ಇಬ್ಬರು ಹಿಂದೂ ಯುವಕರು ಮಂಗಳೂರಿನ ನಟೋರಿಯಸ್‌ ಸಫ್ವಾನ್‌ ಗ್ಯಾಂಗ್‌ ಜೊತೆ ಸೇರಿದ್ದು, ಇಬ್ಬರು ಹಿಂದೂ ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

You may also like