Home » Mangaluru: ಸುಹಾಸ್‌ ಕೊಲೆ ಪ್ರಕರಣ: ಹಿಂದೂ ಕಾರ್ಯಕರ್ತರ ವಿರುದ್ಧ ಹೆಡ್‌ಕಾನ್ಸ್ಟೇಬಲ್‌ ರಶೀದ್‌ ದೂರು!

Mangaluru: ಸುಹಾಸ್‌ ಕೊಲೆ ಪ್ರಕರಣ: ಹಿಂದೂ ಕಾರ್ಯಕರ್ತರ ವಿರುದ್ಧ ಹೆಡ್‌ಕಾನ್ಸ್ಟೇಬಲ್‌ ರಶೀದ್‌ ದೂರು!

0 comments

Mangaluru: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಜ್ಪೆ ಹೆಡ್‌ ಕಾನ್ಸ್‌ಟೇಬಲ್‌ ರಶೀದ್‌ ಕೂಡಾ ಸೇರಿಕೊಂಡಿದ್ದಾರೆ ಎನ್ನುವ ಆರೋಪವನ್ನು ಹಿಂದೂ ಜಾಗರಣ ವೇದಿಕೆ ಮಾಡಿತ್ತು. ಈ ಆರೋಪದ ಬೆನ್ನಲ್ಲೇ ಹೆಡ್‌ ಕಾನ್ಸ್‌ಟೇಬಲ್‌ ರಶೀದ್‌ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್‌ ಮಾಡಲಾಗಿದೆ. ಈ ಕುರಿತು ಹೆಡ್‌ ಕಾನ್ಸ್‌ಟೇಬಲ್‌ ರಶೀದ್‌ ಅವರು ಬಜ್ಪೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಎಫ್‌ಐಆರ್‌ ದಾಖಲಾಗಿದೆ.

ಯಾವುದೇ ಆಧಾರವಿಲ್ಲದೆ ನನ್ನ ಹೆಸರು ಹಾಕಿ ಅವಹೇಳನ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಲಾಗುತ್ತಿದೆ. ಹಿಂದೂ ಮುಖಂಡ ಮೂಡಬಿದ್ರೆಯ ಸಮಿತ್‌ ರಾಜ್‌ ದರೆಗುಡ್ಡೆ, ಹಿಂದೂ ಜಾಗರಣ ವೇದಿಕೆ ಮುಖಂಡ ಕೆ.ಟಿ.ಉಲ್ಲಾಸ್‌ ಸುಹಾಸ್‌ ಶೆಟ್ಟಿ ವಿನಾಕರಣ ನನ್ನ ಹೆಸರು ತಂದಿದ್ದಾರೆ ಎಂದು ಹೆಡ್‌ಕಾನ್ಸ್‌ಟೇಬಲ್‌ ರಶೀದ್‌ ದೂರು ನೀಡಿದ್ದಾರೆ.

ಬಜ್ಪೆ ಪೊಲೀಸ್‌ ಠಾಣೆಯಲ್ಲಿ ಇಬ್ಬರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

Suhas Shetty Murder Case: ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ; ಮುಸ್ಲಿಂ ಹೆಡ್‌ಕಾನ್ಸ್‌ಟೇಬಲ್‌ ಭಾಗಿ?

 

You may also like