Metro Station: ಮೆಟ್ರೋ ನಿಲ್ದಾಣದ ಕೆಳಗೆ ಪೋಷಕರೊಂದಿಗೆ ಮಲಗಿದ್ದ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ತಡರಾತ್ರಿ ದಿನಗೂಲಿ ಕಾರ್ಮಿಕನ ಮಗಳಾದ ಬಾಲಕಿ ಮೆಟ್ರೋ ನಿಲ್ದಾಣದ ಕೆಳಗೆ ತನ್ನ ಪೋಷಕರೊಟ್ಟಿಗೆ ಮಲಗಿದ್ದು, ಆ ಸಂದರ್ಭದಲ್ಲೇ ಬಾಲಕಿಯನ್ನು ಮಲಗಿದ್ದಲ್ಲೇ ಹೊತ್ತೊಯ್ದು, ಏಕಾಂತ ಸ್ಥಳದಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದು ಬಂದಿದೆ. ಕೂಡಲೇ ಪೊಲೀಸರು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತೆರಳಿ ಪರಿಶೀಲನೆ ಮಾಡಿದ್ದಾರೆ. ಬಾಲಕಿಯನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲು ಮಾಡಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಆರೋಪಿಯನ್ನು ಬಂಧನ ಮಾಡಲು ಐದು ವಿಶೇಷ ತಂಡಗಳನ್ನು ರಚಿಸಿದ್ದೇವೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಲಾಗುತ್ತಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಅಲಂಬಾಗ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
