3
Belgaum: ವೃದ್ಧ ದಂಪತಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟು ಬ್ಲ್ಯಾಕ್‌ಮೇಲೆ ಮಾಡಿದ್ದಕ್ಕೆ ನೊಂದ ವೃದ್ಧ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ.
ನಿವೃತ್ತ ರೈಲ್ವೇ ಉದ್ಯೋಗಿಯಾಗಿರುವ ಡಿಯಾಗೋ ನಜರತ್ (83), ಪಾವಿಯಾ (79) ಮೃತ ವ್ಯಕ್ತಿಗಳು.
ಇವರಿಗೆ ಕಳೆದ ಒಂದು ತಿಂಗಳಿನಿಂದ ದುಷ್ಕರ್ಮಿಗಳು ಬೆದರಿಕೆ ಹಾಕಿ ಖದೀಮರ ಖಾತೆಗೆ ಆರು ಲಕ್ಷ ಹಣ ವರ್ಗಾವಣೆ ಮಾಡಿದ್ದಾರೆ. ಆದರೆ ಮತ್ತೆ ಮತ್ತೆ ಹಣ ನೀಡುವಂತೆ ಕಿರುಕುಳ ನೀಡಿದ್ದಾರೆ.
ಇದರಿಂದ ಬೇಸತ್ತು ಪಾವಿಯಾ ಆತ್ಮಹತ್ಯೆ ಮಾಡಿಕೊಂಡಿದ್ದು, ಇದರ ಬೆನ್ನಲ್ಲೇ ಪತಿ ಡಿಯಾಗೋ ಕೂಡ ಡೆತ್ ನೋಟ್ ಬರೆದಿಟ್ಟು ಚಾಕುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
