Home » ಓದುವಂತೆ ತಾಯಿ ಬುದ್ಧಿ ಹೇಳಿದ್ದಕ್ಕೆ ನೊಂದ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ, ಸಾವು

ಓದುವಂತೆ ತಾಯಿ ಬುದ್ಧಿ ಹೇಳಿದ್ದಕ್ಕೆ ನೊಂದ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ, ಸಾವು

0 comments

ಓದು ಎಂದು ಪೋಷಕರು ಬದ್ಧಿಮಾತು ಹೇಳಿದ್ದಕ್ಕೆ ಮನನೊಂದು, ಹಿರೇಬೆಟ್ಟು ಗ್ರಾಮದ ಬಾಲ್ಕಟ್ಟುವಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಬಾಲ್ಕಟ್ಟು ನಿವಾಸಿ ಸಮನ್ವಿ ಎಂದು ಗುರುತಿಸಲಾಗಿದೆ. ಈಕೆ ದ್ವಿತೀಯ ಪಿಯುಸಿಯಲ್ಲಿ ಕಲಿಯುತ್ತಿದ್ದರು.

ಡಿ.26 ರ ಸಂಜೆ ಸಮನ್ವಿ ಅವರು ಓದಿನ ಬದಲು ಮೊಬೈಲ್‌ ಫೋನ್‌ ಬಳಸುತ್ತಿರುವುದನ್ನು ಗಮನಿಸಿದ ತಾಯಿ, ಪರೀಕ್ಷೆಗೆ ಓದು ಎಂದು ಬುದ್ಧಿವಾದ ಹೇಳಿದ್ದರು.

ಆದರೆ ತಾಯಿಯ ಮಾತಿನಿಂದ ನೊಂದ ಸಮನ್ವಿ ಮನೆಯ ಬೆಡ್‌ರೂಂನಲ್ಲಿರುವ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ. ನಂತರ ಕುಟುಂಬದವರು ಇವರನ್ನು ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ತೀವ್ರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಮನ್ವಿ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

You may also like