8
ಪುತ್ತೂರು: ತಾಲೂಕಿನ ಅರಿಯಡ್ಕ ಗ್ರಾಮದ ಗೊಳ್ತಿಲ ನಿವಾಸಿ ಪ್ರತೀಕ್ (22) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ವರದಿಯಾಗಿದೆ.
ಘಟನಾ ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ.
ಮಾಹಿತಿ ಪ್ರಕಾರ ಅನಾರೋಗ್ಯದ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಆತ್ಮಹತ್ಯೆಗೆ ಕಾರಣವೇನೆಂದು ತನಿಖೆಯ ನಂತರ ತಿಳಿದು ಬರಬೇಕಿದೆ.
