Rajat & Vinay: ರೀಲ್ಸ್ ಮಾಡುವಾಗ ಲಾಂಗ್ ಹಿಡಿದು ವಿಡಿಯೋ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಗ್‌ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಮತ್ತು ವಿನಯ್ ಗೌಡ ಅವರಿಗೆ ಮೂರು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ.
ಪರಪ್ಪನ ಅಗ್ರಹಾರ ಜೈಲಿನಿಂದ ನೇರವಾಗಿ ಕೋರ್ಟ್‌ಗೆ ನಟರನ್ನು ಹಾಜರುಪಡಿಸಿದ ಪೊಲೀಸರು ಹೆಚ್ಚಿನ ತನಿಖೆಗೆಂದು ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. 24ನೇ ಎಸಿಎಂಎಂ ಕೋರ್ಟ್ ಇದೀಗ ವಿನಯ್ ಗೌಡ ಹಾಗೂ ರಜತ್‌ರನ್ನು ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ಇಂದು ಇಬ್ಬರ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯುವಂತೆ ಜಡ್ಜ್ ಆದೇಶ ನೀಡಿದ್ದಾರೆ. ಮಚ್ಚು ಬಳಸಿ ರೀಲ್ಸ್ ಮಾಡಿದ್ದಲ್ಲದೆ, ಪೊಲೀಸರಿಗೆ ನಕಲಿ ಫೈಬರ್ ಮಚ್ಚು ನೀಡಿ ಸಾಕ್ಷ್ಯ ನಾಶ ಮಾಡುವ ಪ್ರಯತ್ನ ಮಾಡಿದ್ದರು.
