5
Renukaswamy Murder Case: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನು ರದ್ದು ಮಾಡುವಂತೆ ಬೆಂಗಳೂರು ಪೊಲೀಸರು ಸಲ್ಲಿಕೆ ಮಾಡಿರುವ ಮೇಲ್ಮನವಿ ಅರ್ಜಿ ಮಂಗಳವಾರ (ಇಂದು) ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ.
ಕಳೆದ ಗುರುವಾರ ಈ ಮೇಲ್ಮನವಿ ಅರ್ಜಿ ವಿಚಾರಣೆ ಮಾಡಿದ್ದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆ.ಬಿ.ಪಾರ್ದಿವಾಲಾ ನೇತೃತ್ವದ ವಿಭಾಗೀಯ ಪೀಠ, ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನಿನ ಕುರಿತು ತನ್ನ ಅಸಮಾಧಾನವನ್ನು ವ್ಯಕ್ತ ಮಾಡಿತ್ತು. ಹೈಕೋರ್ಟ್ ಈ ವಿಚಾರಣೆಯನ್ನು ಜು.22 ಮಂಗಳವಾರಕ್ಕೆ ಮುಂದೂಡಿಕೆ ಮಾಡಿತ್ತು.
