Home » Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್‌

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್‌

0 comments
Renukaswamy Murder Case

Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಡಿ ಬಾಸ್‌ ಗ್ಯಾಂಗ್‌ನ 17 ಸದಸ್ಯರ ಪೈಕಿ ಇದೀಗ ನಾಲ್ವರನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ವರ್ಗಾಯಿಸಲು ಕೋರ್ಟ್‌ ಅನುಮತಿ ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳನ್ನು ಒಂದೇ ಕಡೆ ಇಡುವುದು ಸುರಕ್ಷಿತವಲ್ಲ. ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಆರೋಪಿಗಳ ಜೈಲು ಬದಲಾವಣೆಗೆ ಪೊಲೀಸರು ನ್ಯಾಯಾಲಯದಲ್ಲಿ ಕೇಳಿದ್ದರು.

ಈ ವಿಚಾರಣೆಯನ್ನು ಸೋಮವಾರ (ಇಂದು) ಕೈಗೆತ್ತಿಕೊಂಡ ನ್ಯಾಯಾಲಯ ಇದಕ್ಕೆ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಪ್ರಸನ್ನ ಕುಮಾರ್‌ ಯಾಕೆ ಆರೋಪಿಗಳ ವರ್ಗಾವಣೆ ಅಗತ್ಯ ಎನ್ನುವುದರ ಕುರಿತು ವಿವರಣೆ ನೀಡಿದ್ದು, ಎ8 ರವಿ, ಎ15 ಕಾರ್ತಿಕ್‌, ಎ16 ಕೇಶವ ಮೂರ್ತಿ, ಎ17 ನಿಖಿಲ್‌ ನಾಯಕ್‌ ನನ್ನು ತುಮಕೂರು ಜೈಲಿಗೆ ಶಿಫ್ಟ್‌ ಮಾಡಲು ಅನುಮತಿ ನೀಡಿದೆ.

ರೇಣುಕಾಸ್ವಾಮಿ ಮೃತದೇಹ ಸುಮ್ಮನಹಳ್ಳಿ ಬಳಿಯ ಕಾಲುವೆ ಬಳಿ ಪತ್ತೆಯಾಗಿದ್ದು, ಆ ಸಂದರ್ಭದಲ್ಲಿ ನಟ ದರ್ಶನ್‌ನಿಂದ 30 ಲಕ್ಷ ರೂ ಹಣ ಪಡೆದು ತಾವೇ ಕೊಲೆ ಮಾಡಿದ್ದೆಂದು ನಾಲ್ವರು ಆರೋಪಿಗಳು ಸರೆಂಡರ್‌ ಆಗಿದ್ದು, ಈ ಕುರಿತು ಪೊಲೀಸರು ವಿಚಾರಣೆ ನಡೆಸಿದಾಗ ನಟ ದರ್ಶನ್‌ ಸೇರಿ ಡಿ ಗ್ಯಾಂಗ್‌ ನಲ್ಲಿದ್ದ ಈ ಘಟನೆಗೆ ಸಂಬಂಧಪಟ್ಟ ಎಲ್ಲರ ಹೆಸರನ್ನು ಹೇಳಿದ್ದರು.

Soundarya Jagadish-Pavitra Gowda: ನಿರ್ಮಾಪಕ ಸೌಂದರ್ಯ ಜಗದೀಶ್‌ ಕೊಟ್ಟ ಹಣದಲ್ಲಿ ಪವಿತ್ರಾ ಗೌಡ ಮನೆ ಖರೀದಿ ಆರೋಪ

ರೇಣುಕಾಸ್ವಾಮಿ ಕೊಲೆ ಕೇಸಿಗೆ ಸಂಬಂಧಪಟ್ಟಂತೆ ಮೊದಲಿಗೆ ಕಾರ್ತಿಕ್‌, ಕೇಶವ್‌, ನಿಖಿಲ್‌ ಪೊಲೀಸರ ಮುಂದೆ ಶರಣಾಗಿದ್ದು, ಮೂವರು ಕೊಲೆ ಬಗ್ಗೆ ಸಂಪೂರ್ಣ ವಿವರಗಳನ್ನು ಪೊಲೀಸರ ಮುಂದೆ ಹೇಳಿದ್ದರು. ನಟ ದರ್ಶನ್‌, ನಟಿ ಪವಿತ್ರಾ ಗೌಡ ಹೆಸರು ಹೇಳಿದ್ದು, ನಂತರ ಈ ಕೇಸಿನಲ್ಲಿ ಒಟ್ಟು 14 ಜನ ಅರೆಸ್ಟ್‌ ಆಗಿದ್ದರು.

ಈ ಹಿನ್ನೆಲೆಯಲ್ಲಿ ದರ್ಶನ್‌ ಸೇರಿ ಉಳಿದವರ ಹೆಸರು ಹೇಳಿದ ಆರೋಪಿಗಳಾದ ಕಾರ್ತಿಕ್‌, ಕೇಶವ್‌ ಹಾಗೂ ನಿಖಿಲ್‌ ಸೇರಿ ಇನ್ನೋರ್ವ ಆರೋಪಿಯನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆಡೆ ಸ್ಥಳಾಂತರ ಮಾಡುವಂತೆ ಸ್ಪೆಷಲ್‌ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಪ್ರಸನ್ನ ಕುಮಾರ್‌ ಮನವಿ ಮಾಡಿದ್ದರು. ಇದನ್ನು ನ್ಯಾಯಾಲಯವು ಪುರಸ್ಕರಿಸಿದ್ದು, ನಾಲ್ವರು ಆರೋಪಿಗಳನ್ನು ತುಮಕೂರು ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾಯಿಸಲು ಅನುಮತಿ ನೀಡಿದೆ.

Protein Rich foods: ಮೊಟ್ಟೆ ಬದಲಾಗಿ ಇಲ್ಲಿದೆ ನಿಮಗೆ ಪ್ರೊಟೀನ್ ರಿಚ್ ಫುಡ್!

 

You may also like

Leave a Comment