Home » Salman Khan Threat: ಸಲ್ಮಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆ, 5 ಕೋಟಿ ಬೇಡಿಕೆ!

Salman Khan Threat: ಸಲ್ಮಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆ, 5 ಕೋಟಿ ಬೇಡಿಕೆ!

371 comments

Salman Khan Threat: ಬಾಲಿವುಡ್ ನ ಭಾಯಿಜಾನ್ ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ ಬಂದಿದೆ. ತನ್ನ ಆತ್ಮೀಯ ಗೆಳೆಯ ಬಾಬಾ ಸಿದ್ದಿಕಿಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಗುಂಡಿಕ್ಕಿ ಕೊಂದಾಗಿನಿಂದ ಸಲ್ಮಾನ್ ಖಾನ್ ಗೆ ಸಂದೇಶಗಳು ಬರುತ್ತಿವೆ. ಅವರ ಪ್ರಾಣಕ್ಕೂ ಅಪಾಯವಿದೆ ಎಂದು ಹೇಳಲಾಗುತ್ತಿದೆ. ಮುಂಬೈ ಟ್ರಾಫಿಕ್ ಪೊಲೀಸರಿಗೆ ಕಳುಹಿಸಿರುವ ಸಂದೇಶದಲ್ಲಿ ಈ ಬಾರಿ ಬೆದರಿಕೆ ಹಾಕಲಾಗಿದೆ. ಸಂದೇಶ ಕಳುಹಿಸುವವರು ತನ್ನನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ಎಂದು ಹೇಳಿದ್ದಾರೆ. ಮಾಹಿತಿಯ ಪ್ರಕಾರ, ಈತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ಎಂದು ಸಂದೇಶದಲ್ಲಿ ಹೇಳಲಾಗುತ್ತಿದ್ದು, 5 ಕೋಟಿ ನೀಡದಿದ್ದರೆ ಸಲ್ಮಾನ್ ಖಾನ್ ಸ್ಥಿತಿ ಮಾಜಿ ಶಾಸಕನಿಗಿಂತ ಕೆಟ್ಟದಾಗಿರುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಲ್ಮಾನ್ ಖಾನ್‌ನಿಂದ 5 ಕೋಟಿ ರೂ ಡಿಮ್ಯಾಂಡ್
ಲಘುವಾಗಿ ಪರಿಗಣಿಸಬೇಡಿ ಎಂದು ಬೆದರಿಕೆ ಸಂದೇಶದಲ್ಲಿ ಬರೆಯಲಾಗಿದೆ. ಸಲ್ಮಾನ್ ಖಾನ್ ಜೀವಂತವಾಗಿರಲು ಮತ್ತು ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ, ಅವರು 5 ಕೋಟಿ ರೂ. ನೀಡಬೇಕು. ಒಂದು ವೇಳೆ ಈ ಹಣ ನೀಡದಿದ್ದರೆ ಸಲ್ಮಾನ್ ಖಾನ್ ಕೂಡ ಬಾಬಾ ಸಿದ್ದಿಕಿಯ ರೀತಿ ಸಾವಿಗೀಡಾಗುತ್ತಾನೆ ಎಂದು ಬರೆಯಲಾಗಿದೆ.

ಪೊಲೀಸರು ಸಂದೇಶದ ಮೂಲಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಸಲ್ಮಾನ್ ಖಾನ್ ಅವರ ಆಪ್ತ ಸ್ನೇಹಿತ ಮತ್ತು ಹಿರಿಯ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿಯನ್ನು ದಸರಾ ದಿನದಂದು ಗುಂಡಿಕ್ಕಿ ಕೊಂದ ಸಮಯದಲ್ಲಿ ಈ ಬೆದರಿಕೆ ಬಂದಿದೆ. ಈ ಹತ್ಯೆಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಹಿಸಿಕೊಂಡಿದ್ದು, ಸಲ್ಮಾನ್ ಖಾನ್ ಅವರನ್ನೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

You may also like

Leave a Comment