6
Shimogga: ಶಿವಮೊಗ್ಗ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಹಿಂದೂ ದೇವರಿಗೆ ಅವಮಾನ ಮಾಡಿದ ಘಟನೆ ನಡೆದಿದೆ. ಹೀಗಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಈ ಘಟನೆ ನಡೆದಿದೆ.
ಗಣೇಶನ ಮೂರ್ತಿಗೆ ಕಾಲಿನಿಂದ ಒದ್ದು ಹಾಗೂ ಅಲ್ಲೇ ಇದ್ದ ನಾಗನ ವಿಗ್ರಹ ಚರಂಡಿಗೆ ಎಸೆದು ಅವಮಾನ ಮಾಡಿದ ಘಟನೆ ನಡೆದಿದೆ.
ಬಂಗಾರಪ್ಪ ಬಡಾವಣೆಯ ಮುಖ್ಯ ರಸ್ತೆಯ ಬಳಿಯ ಪಾರ್ಕ್‌ನಲ್ಲಿ ಗಣೇಶನ ಮೂರ್ತಿ ಹಾಗೂ ನಾಗನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು. ನಿನ್ನೆ ಸಂಜೆ ಇಬ್ಬರು ಅನ್ಯಕೋಮಿನ ಯುವಕರು ಗಣೇಶನ ಮೂರ್ತಿಗೆ ಕಾಲಿನಿಂದ ಒದ್ದು ಹಾಗೂ ಅಲ್ಲೇ ಇದ್ದ ನಾಗನ ವಿಗ್ರಹ ಚರಂಡಿಗೆ ಎಸೆದು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.
ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧನ ಮಾಡಲಾಗಿದೆ. ವಿಡಿಯೋ ಆಧರಿಸಿ ಇಬ್ಬರ ಬಂಧನ ಮಾಡಲಾಗಿದೆ ಎಂದು ಎಸ್ ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
