Mangalore: ಮಂಗಳೂರು ಮತ್ತೆ ಉದ್ವಿಘ್ನಗೊಂಡಿದ್ದು, ವಿಶ್ವ ಹಿಂದೂ ಪರಿಷತ್ ಹಿಂದೂ ಕಾರ್ಯಕರ್ತನ ಹತ್ಯೆಯನ್ನು ಖಂಡಿಸಿ ದಕ್ಷಿಣ ಕನ್ನಡ ಬಂದ್‌ಗೆ ಕರೆ ನೀಡಿದೆ. ಹಿಂದೂ ಕಾರ್ಯಕರ್ತರು ಜಮಾಯಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದರ ಬೆನ್ನಲ್ಲೇ ಮಂಗಳೂರು ಪೊಲೀಸರು ಆರೋಪಿಗಳ ಸುಳಿವು ಪತ್ತೆ ಹಚ್ಚಿರುವ ಕುರಿತು ವರದಿಯಾಗಿದೆ.
ಸುಹಾಸ್ ಶೆಟ್ಟಿ ಮೇಲೆ ದಾಳಿ ನಡೆಸಿ ಪರಾರಿಯಾದ ಆರೋಪಿಗಳು ಯಾರು ಎಂದು ನಮಗೆ ಗೊತ್ತಾಗಿದೆ. ಆರೋಪಿಗಳ ಬಂಧನಕ್ಕೆ ತಂಡ ರಚನೆ ಮಾಡುತ್ತೇವೆ. ಆರೋಪಿಗಳ ಸುಳಿವನ್ನು ಈಗಾಗಲೇ ಪತ್ತೆ ಹಚ್ಚಲಾಗಿದೆ ಎಂದು ಎಡಿಜಿಪಿ ಆರ್.ಹಿತೇಂದ್ರ ಹೇಳಿದ್ದಾರೆ. ಕಾನೂನು ಕೈಗೆತ್ತಿಕೊಂಡವರ ಮೇಲೆ ಕಾನೂನು ರೀತಿ ಕ್ರಮ ಆಗಲಿದೆ ಎಂದು ಹೇಳಿದ್ದಾರೆ.
ಪೋಸ್ಟ್‌ಮಾರ್ಟಂ ನಡೆದಿದ್ದು, ಬಂಟ್ವಾಳದಲ್ಲಿ ಅಂತಿಮ ಕಾರ್ಯ ನಡೆಯಲಿದೆ ಎಂದು ಕುಟುಂಬದವರು ನಡೆಯಲಿದೆ ಎಂದು ಕುಟುಂಬಸ್ಥರು ಹೇಳಿದ್ದಾರೆ. ಸಾರ್ವಜನಿಕರಲ್ಲಿ ವಿನಂತಿ ಏನೆಂದರೆ ಎಲ್ಲರೂ ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದೂ ಅವರು ಹೇಳಿದ್ದಾರೆ.
ಮೇ.01 ರ ರಾತ್ರಿ ಸುಹಾಸ್ ಶೆಟ್ಟಿ ಕೊಲೆ ನಡೆದಿದ್ದು, ದಾಳಿಗೆ ಬಳಸಿದ್ದ ಮೀನಿನ ವಾಹನ, ಸ್ವಿಫ್ಟ್ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇತ್ತ ಸುಹಾಸ್ ಶೆಟ್ಟಿಯ ಇನೋವಾ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
