Crime: ಹಾಸನ ಜಿಲ್ಲೆಯ ಹೊಳೆನರಸೀಪುರ ನಗರ ಠಾಣೆ ಪೊಲೀಸರು ನಾಲ್ವರು ಖತರ್ನಾಕ್ ಕಳ್ಳಿಯರನ್ನು ಬಂಧಿಸಿ 6.38 ಲಕ್ಷ ರೂ. ಮೌಲ್ಯದ ವಶಪಡಿಸಿಕೊಂಡಿದ್ದಾರೆ. ಚಿನ್ನಾಭರಣ ಬಂಧಿತ ಆರೋಪಿಗಳನ್ನು ಆಂಧ್ರಪ್ರದೇಶದ ಚಿತ್ತೂರು ಜಿಲೈ ಕುಪ್ಪಂ ಗ್ರಾಮದ ಶಶಿ (35), ಮಾಧವಿ (40), ಅಕಿಲ (30) ಹಾಗೂ ವಿದ್ಯಾ (29) ಎಂದು ಗುರುತಿಸಲಾಗಿದೆ.
ನಾಲ್ವರು ಒಂದೇ ಗ್ರಾಮದವರಾಗಿದ್ದು, ಶಶಿ ಗಾರ್ಮೆಂಟ್ಸ್ ಉದ್ಯೋಗಿಯಾಗಿದ್ದು ಉಳಿದ ಮೂವರು ಕ್ರಷರ್‌ಗಳಲ್ಲಿ ಉದ್ಯೋಗ ಮಾಡಿಕೊಂಡಿದ್ದಾರೆ.
ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ ಅಮಾಯಕ ಮಹಿಳೆಯರೇ ಇವರೇ ಟಾರ್ಗೆಟ್ ಆಗಿದ್ದು ನೂಕುನುಗ್ಗಲಿನಲ್ಲಿ ಮಹಿಳೆಯರು ಕೆಎಸ್‌ಆರ್‌ಟಿಸಿ ಬಸ್ ಹತ್ತುವಾಗ ಅವರ ಮೈ ಮೇಲಿನ ಚಿನ್ನದ ಒಡವೆ, ವ್ಯಾನಿಟಿ ಬ್ಯಾಗ್‌ಗಳಿದ್ದ ಚಿನ್ನಾಭರಣಗಳನ್ನು ದೋಚುತ್ತಿದ್ದರು. ತಾವು ಸಹ ಬಸ್ ಹತ್ತುವರಂತೆ ನಟನೆ ಮಾಡುವ ಕಾರಣ ಯಾರಿಗೂ ಸಂಶಯ ಬರುತ್ತಿರಲಿಲ್ಲ.
ಸದ್ಯ ಬಂಧಿತರಿಂದ 35 ಗ್ರಾಂ ತೂಕದ ಚಿನ್ನದ ಸರ, 22 ಗ್ರಾಂ ತೂಕದ ನೆಕ್ಲಸ್, 5 ಗ್ರಾಂ ತೂಕದ ಬೆಳ್ಳಿ ಗಣಪತಿ ಡಾಲರ್ ಹಾಗೂ 29 ಗ್ರಾಂ ತೂಕದ ಚಿನ್ನದ ಸರ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ದೊರೆತಿದೆ.
