Home » Udupi: ಉಡುಪಿ: ಅಕ್ರಮ ಮರಳುಗಾರಿಕೆ; 17 ಬೋಟ್ ಗಳು ಪೊಲೀಸರ ವಶಕ್ಕೆ

Udupi: ಉಡುಪಿ: ಅಕ್ರಮ ಮರಳುಗಾರಿಕೆ; 17 ಬೋಟ್ ಗಳು ಪೊಲೀಸರ ವಶಕ್ಕೆ

0 comments

Udupi: ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಿರಂತರವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗಳ ಮೇಲೆ ದಾಳಿ ನಡೆಸಿದ ಪೊಲೀಸರು, 17 ಬೋಟ್ ಗಳನ್ನು ವಶಕ್ಕೆ ಪಡೆದುಕೊಂಡ ಪ್ರಕರಣ ಹಾವಂಜೆ ಗ್ರಾಮದ ಮುಗ್ಗೇರಿ ಹಾಗೂ ಉಳ್ಳೂರು ಗ್ರಾಮದ ಅಮ್ಮುಂಜೆ ಪರಿಸರದಲ್ಲಿ ನಡೆದದೆ.

ನದಿಗಳಲ್ಲಿ ಬೋಟ್ ಗಳನ್ನು ಉಪಯೋಗಿಸಿಕೊಂಡು ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಮಾಹಿತಿ ಲಭಿಸಿದ ಹಿನ್ನೆಲೆ ಪೊಲೀಸರು ದಾಳಿ ನಡೆಸಿದ್ದಾರೆ.ಈ ವೇಳೆ ಮರಳುಗಾರಿಕೆಗೆ ಉಪಯೋಗಿಸಿದ್ದ 17 ಬೋಟ್ ಗಳನ್ನು ವಶಕ್ಕೆ ಪಡೆಯಲಾಗಿದ್ದು, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಗೋಪಿಕೃಷ್ಣ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಕಾರ್ಯಾಚರಣೆಯಲ್ಲಿ ಬ್ರಹ್ಮಾವರ ಠಾಣಾ ಪೊಲೀಸ್‌ ಉಪ ನಿರೀಕ್ಷಕರಾದ ಅಶೋಕ ಮಾಳಾಬಗಿ, ಸುದರ್ಶನ್ ದೊಡಮನಿ ಹಾಗೂ ಠಾಣಾ ಸಿಬ್ಬಂದಿ ಭಾಗವಹಿಸಿದ್ದು, ತನಿಖೆ ಮುಂದುವರೆದಿದೆ.

You may also like