4
Vitla: ಉರಿಮಜಲು ಸಮೀಪದ ದೇವಸ್ಯ ರಸ್ತೆ ತಿರುವಿನಲ್ಲಿ ಮನೆಯೊಳಗೆ ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಡೆದಿದೆ. ಗಣೇಶ್ ಗೌಡ ಎಂಬುವವರಿಗೆ ಸೇರಿದ ಮನೆಯಲ್ಲಿ ಈ ಕಳ್ಳತನ ಹಾಡಹಗಲೇ ನಡೆದಿದೆ.
ವಿಟ್ಲ-ಪುತ್ತೂರು ಮುಖ್ಯ ರಸ್ತೆಯ ಉರಿಮಜಲು, ದೇವಸ್ಯ ರಸ್ತೆ ತಿರುವು ಸಮೀಪ ಇರುವ ಮನೆ ಇದಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯೊಳಗೆ ನುಗ್ಗಿದ ಕಳ್ಳರು ಏಳೂವರೆ ಪವನ್ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದು, ತನಿಖೆ ಮಾಡುತ್ತಿದ್ದಾರೆ.
