Home » Begum Khaleda Zia: ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದ ಬೇಗಂ ಖಲೀದಾ ಜಿಯಾ ನಿಧನ

Begum Khaleda Zia: ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದ ಬೇಗಂ ಖಲೀದಾ ಜಿಯಾ ನಿಧನ

0 comments

Begum Khaleda Zia: ಬಾಂಗ್ಲಾದೇಶದ (Bangladesh) ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ (Begum Khaleda Zia) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಬೇಗಂ ಅವರಿಗೆ 80 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದ ಕಾರಣ ಢಾಕಾದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಬೆಳಗ್ಗೆ 6 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.

ಬಾಂಗ್ಲಾದೇಶದಲ್ಲಿ ಮುಂದಿನ ವರ್ಷ ನಡೆಯುವ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿ ಬೇಗಂ ಅವರು ಮತ್ತೊಮ್ಮೆ ದೇಶವನ್ನು ಮುನ್ನಡೆಸುತ್ತಾರೆ ಎಂದು ಭಾವಿಸಲಾಗಿತ್ತು. ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ಅಧ್ಯಕ್ಷೆ ನಿಧನಕ್ಕೆ ಪಕ್ಷವು ಸಂತಾಪ ಸೂಚಿಸಿದೆ.

You may also like