5
ಕಾರವಾರ: ಗೋಕರ್ಣ ಪ್ಯಾರಡೈಸ್ ಬೀಚ್‌ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಬೋಟಿಂಗ್‌ಗೆ ತೆರಳಿದ್ದಾಗ ಅಸ್ವಸ್ಥಗೊಂಡು ಸಾವಿಗೀಡಾಗಿದ್ದಾರೆ.
ಮೃತರನ್ನು ಬೆಂಗಳೂರು ನಿವಾಸಿ ನಾಗರತಿನಮ್ (58) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಕುಟುಂಬದ ಜೊತೆ ಬಂದಿದ್ದ ಮಹಿಳೆ, ಬೋಟಿಂಗ್‌ಗೆ ತೆರಳಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದರು. ತಕ್ಷಣ 108 ಆಂಬುಲೆನ್ಸ್‌ಗೆ ಕರೆ ಮಾಡಿದರೂ ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಬಂದಿಲ್ಲ ಎಂದು ಆರೋಪಿಸಲಾಗಿದೆ.
ನಂತರ ಕುಮಟಾದಿಂದ ಖಾಸಗಿ ಆಂಬುಲೆನ್ಸ್ ಕರೆಸಿ ಚಿಕಿತ್ಸೆಗೆ ಕರೆದೊಯ್ಯುವ ವೇಳೆ ಮಹಿಳೆ ಸಾವಿಗೀಡಾಗಿದ್ದಾರೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
