Home » Actor Umesh: ಕನ್ನಡ ಚಲನಚಿತ್ರರಂಗದ ಹಿರಿಯ ನಟ ಉಮೇಶ್ ಇನ್ನಿಲ್ಲ

Actor Umesh: ಕನ್ನಡ ಚಲನಚಿತ್ರರಂಗದ ಹಿರಿಯ ನಟ ಉಮೇಶ್ ಇನ್ನಿಲ್ಲ

0 comments

Actor Umesh: ಅನಾರೋಗ್ಯ ದಿಂದ ಬಳಲುತ್ತಿದ್ದ ಸ್ಯಾಂಡಲ್​ವುಡ್ ಹಿರಿಯ ನಟ ಎಂ.ಎಸ್. ಉಮೇಶ್ ನಿಧನರಾಗಿದ್ದಾರೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 80 ವರ್ಷ ವಯಸ್ಸಿನ ಅವರು ಚಿಕಿತ್ಸೆ ಫಲಕಾರಿ ಆಗದೇ ಕೊನೆಯುಸಿರು ಎಳೆದಿದ್ದಾರೆ. ನೂರಾರು ಸಿನಿಮಾಗಳಲ್ಲಿ ನಟಿಸಿ ಎಂ.ಎಸ್. ಉಮೇಶ್ ಅವರು ಜನಪ್ರಿಯತೆ ಪಡೆದಿದ್ದರು.

ಉಮೇಶ್ ಅವರನ್ನು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.ಉಮೇಶ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾಗ ಅನೇಕ ಕಲಾವಿದರು ಹೋಗಿ ಮಾತನಾಡಿಸಿದ್ದರು. ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದರು. ಆದರೆ ಪ್ರಾರ್ಥನೆ ಫಲಿಸಿಲ್ಲ. ಚಿಕಿತ್ಸೆ ಫಲಕಾರಿ ಆಗದೇ ಎಂ.ಎಸ್. ಉಮೇಶ್ ಅವರು ನಿಧನರಾಗಿದ್ದಾರೆ.

You may also like