Home » Heart Attack: ಸಿನಿಮಾ ಚಿತ್ರೀಕರಣ ವೇಳೆ ಸ್ಯಾಂಡಲ್ ವುಡ್ ನಿರ್ದೇಶಕ ಸಾವು

Heart Attack: ಸಿನಿಮಾ ಚಿತ್ರೀಕರಣ ವೇಳೆ ಸ್ಯಾಂಡಲ್ ವುಡ್ ನಿರ್ದೇಶಕ ಸಾವು

0 comments

Heart Attack: ಸಿನಿಮಾ ಚಿತ್ತೀಕರಣ ವೇಳೆಯಲ್ಲಿ ಹೃದಯಾಘಾತದಿಂದ ನಿರ್ದೇಶಕ ಸಾವನ್ನಪ್ಪಿದ್ದಾರೆ. ಸ್ಯಾಂಡಲ್ವುಡ್ ನಿರ್ದೇಶಕ ಸಂಗೀತ್ ಸಾಗರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಹರಿಹರಪುರದಲ್ಲಿ ಸಿನಿಮಾ ಚಿತ್ತೀಕರಣದ ವೇಳೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.’ಪಾತ್ರಧಾರಿ’ ಸಿನಿಮಾದ ಚಿತ್ರೀಕರಣ ನಡೆಸುತ್ತಿದ್ದಾಗ ಹೃದಯಾಘಾತ ಸಂಭವಿಸಿದೆ. ‘ಪಾತ್ರಧಾರಿ’ ಸಿನಿಮಾದ ನಿರ್ದೇಶಕ ಮತ್ತು ಸಂಗೀತ ನಿರ್ದೇಶಕರಾಗಿದ್ದರು. ಅವರು ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ದೊಡ್ಡನಾಗರ ಮೂಲದವರಾಗಿದ್ದಾರೆ. 20 ದಿನದಿಂದ ಹರಿಹರಪುರ ತೀರ್ಥಹಳ್ಳಿ ಸುತ್ತಮುತ್ತ ಚಿತ್ರೀಕರಣ ನಡೆಯುತ್ತಿತ್ತು.

You may also like