ಸವಣೂರು: ವಾಂತಿ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಒಂದೂವರೆ ತಿಂಗಳ ಮಗುವೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆಯೊಂದು ಸವಣೂರು ಸಮೀಪದ ಪುಣ್ಯಪ್ಪಾಡಿ ಗ್ರಾಮದ ಓಡಂತರ್ಯದಲ್ಲಿ ನಡೆದಿದೆ.
ಡಿ.5 ರಂದು ಮಗುವಿಗೆ ಅನಿರೀಕ್ಷಿತವಾಗಿ ವಾಂತಿ ಕಾಣಿಸಿಕೊಂಡಿದೆ. ಪೋಷಕರು ಕೂಡಲೇ ಕುಂಬ್ರದಲ್ಲಿರುವ ಖಾಸಗಿ ಕ್ಲಿನಿಕ್‌ಗೆ ಕರೆದುಕೊಂಡು ಹೋಗಿ ಮಗುವಿಗೆ ಔಷಧ ನೀಡಿದ್ದಾರೆ. ಆದರೆ ಅದೇ ದಿನ ರಾತ್ರಿ ಮಗುವಿನ ಆರೋಗ್ಯ ಇನ್ನಷ್ಟು ಹದಗೆಟ್ಟಿದೆ. ವಾಂತಿ ಜೊತೆಗೆ ಉಸಿರಾಟದ ತೊಂದರೆ ಕೂಡಾ ಕಾಣಿಸಿದೆ. ಮಗುವಿನ ಸ್ಥಿತಿ ಗಂಭೀರವಾಗುತ್ತಿದ್ದಂತೆ ಪೋಷಕರು ಕೂಡಲೇ ಪುತ್ತೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಕೂಡಲೇ ವೈದ್ಯರು ತುರ್ತು ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲು ಹೇಳಿದ್ದಾರೆ. ವೈದ್ಯರ ಸಲಹೆಯ ಮೇರೆಗೆ ಮಗುವನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಮಂಗಳೂರಿನ ಆಸ್ಪತ್ರೆಯಲ್ಲಿ ವೈದ್ಯರು ಮಗುವನ್ನು ಪರಿಶೀಲನೆ ಮಾಡಿದಾಗ ಮಗು ಆಗಲೇ ಕೊನೆಯುಸಿರೆಳೆದಿರುವುದಾಗಿ ತಿಳಿಸಿದ್ದಾರೆ.
ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಗುವಿನ ಸಾವಿಗೆ ನಿಖರ ಕಾಣಗಳ ಕುರಿತು ತನಿಖೆ ನಡೆಯುತ್ತಿದೆ.
