Home » Kodagu: ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತ್ಯು

Kodagu: ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತ್ಯು

0 comments
Death News

Kodagu: ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ. ಮಡಿಕೇರಿ ಕಾಲೇಜ್ ವೊಂದರ ವಿದ್ಯಾರ್ಥಿಗಳಾಗಿರುವ ಚಂಗಪ್ಪ (19) ಮತ್ತು ತರುಣ್ ತಿಮ್ಮಯ್ಯ ಎಂಬವರು ಮೃತ ವಿದ್ಯಾರ್ಥಿಗಳಾಗಿದ್ದಾರೆ. ಒಟ್ಟು ಮೂವರು ವಿದ್ಯಾರ್ಥಿಗಳು ಸ್ನಾನಕ್ಕೆಂದು ನೀರಿಗೆ ಇಳಿದಿದ್ದು, ನಂತರ ಮೇಲಕ್ಕೆ ಬರಲಾಗದೇ ಇವರ ಪೈಕಿ ಚಂಗಪ್ಪ (19) ಮತ್ತು ತರುಣ್ ತಿಮ್ಮಯ್ಯ ಮುಳುಗಿ ಅಸು ನೀಗಿದ್ದಾರೆ. ಇನ್ನೋರ್ವ ವಿದ್ಯಾರ್ಥಿಯ ಜೀವ ಉಳಿದಿದೆ.

You may also like