Home » ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 2022-23ನೇ ಸಾಲಿನ ವಿದ್ಯಾರ್ಥಿ ವೇತನ | ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿ.31

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 2022-23ನೇ ಸಾಲಿನ ವಿದ್ಯಾರ್ಥಿ ವೇತನ | ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿ.31

0 comments

2022-23 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡುತ್ತಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿಸೆಂಬರ್ 31 ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೆಬ್ಸೈಟ್ ವಿಳಾಸ : www.bcwd.karnataka.gov.in/ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ : 8050770005
ಇಮೇಲ್- bcwd.scholarship@karnataka.gov.in
ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ postmatrichelp@karnataka.gov.in

You may also like

Leave a Comment