Home » B C Nagesh: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಹಿಜಾಬ್ ಧರಿಸುವಂತಿಲ್ಲ: ಸಚಿವ ಬಿ.ಸಿ. ನಾಗೇಶ್

B C Nagesh: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಹಿಜಾಬ್ ಧರಿಸುವಂತಿಲ್ಲ: ಸಚಿವ ಬಿ.ಸಿ. ನಾಗೇಶ್

by ಹೊಸಕನ್ನಡ
5 comments

BC Nagesh :ಮಾರ್ಚ್(March) 9ರಿಂದ ಆರಂಭವಾಗಲಿರುವ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅನುಮತಿ ಕೋರಿ ವಿದ್ಯಾರ್ಥಿನಿಯರು ಈ ಹಿಂದೆ ಮನವಿ ಮಾಡಿದ್ದರು. ಇದೀಗ ಈ ಮನವಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ತಿರಸ್ಕರಿಸಿದ್ದು ಹಿಜಾಬ್(Hijab) ಧರಿಸಲು ಅವಕಾಶವಿಲ್ಲ ಎಂದು ಸೂಚಿಸಿದೆ. ಅಲ್ಲದೆ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನು ನೀಡಿದೆ.

ಉಡುಪಿ(Udupi), ಚಿಕ್ಕಬಳ್ಳಾಪುರ(Chikkaballapura), ಚಾಮರಾಜನಗರ(Chamarajanagara) ಮತ್ತು ಬೆಂಗಳೂರು ಗ್ರಾಮಾಂತರ(Bangalore) ಜಿಲ್ಲೆಗಳ ಪದವಿಪೂರ್ವ ಕಾಲೇಜುಗಳ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಆಯಾ ಕಾಲೇಜುಗಳ ಪ್ರಾಂಶುಪಾಲರಿ(Principal)ಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದ್ದರು ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಈ ಕುರಿತು ಪ್ರತಿಕ್ರಿಯಿಸಿದ ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್(Education Minister, BC Nagesh)’ಹಿಜಾಬ್‌ ಪ್ರಸ್ತಾವನೆಯು ಸುಪ್ರೀಂ ಕೋರ್ಟ್‌ನಲ್ಲಿರುವ ಕಾರಣ ವಾರ್ಷಿಕ ಪರೀಕ್ಷೆಯ ವೇಳೆ ಹಿಜಾಬ್ ಅನುಮತಿಸುವ ಪ್ರಶ್ನೆಯೇ ಉದ್ಬಾವಿಸುವುದಿಲ್ಲ. ಈ ಕಾರಣಕ್ಕೆ ಯಾವ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗುತ್ತಾರೆ ಎಂಬುದನ್ನು ನಾವು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ’ ಎಂದಿದ್ದಾರೆ.

ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಕಾಲೇಜೊಂದರ ಪ್ರಾಂಶುಪಾಲರು ಮಾತನಾಡಿ, ಕಳೆದ ಒಂದು ವಾರದಲ್ಲಿ ಪರೀಕ್ಷೆಗೆ ಹಿಜಾಬ್ ಧರಿಸಲು ಅನುಮತಿ ಕೋರಿ ಎರಡು ಮನವಿಗಳು ಬಂದಿದ್ದು, ನಾವು ಅವುಗಳನ್ನು ಸ್ಪಷ್ಟವಾಗಿ ತಿರಸ್ಕರಿಸಿದ್ದೇವೆ. ಅಲ್ಲದೇ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಯ ನಿಯಮಾವಳಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ಸೂಚಿಸಲಾಗಿದೆ ಎಂದರು.

‘ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯ ಭಾಗ ಅಲ್ಲ’ ಎಂದು ರಾಜ್ಯ ಹೈಕೋರ್ಟ್‌ 2022 ರ ಮಾರ್ಚ್‌ನಲ್ಲಿ ತಿಳಿಸಿತ್ತು. ಅಲ್ಲದೇ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ನಿಗದಿಪಡಿಸಿದ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು ಎಂದು ರಾಜ್ಯ ಸರ್ಕಾರ 2022 ಫೆ. 5ರಂದು ಆದೇಶವನ್ನು ಹೊರಡಿಸಿದ್ದು, ಹೈಕೋರ್ಟ್ ಅದನ್ನು ಎತ್ತಿಹಿಡಿದಿತ್ತು. ನಂತರ ಹೈಕೋರ್ಟ್(High court)ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಮರುಪ್ರಶ್ನಿಸಲಾಗಿದ್ದು, ಯಾವುದೇ ನಿರ್ದಿಷ್ಟ ತೀರ್ಪು ಇನ್ನೂ ಬಂದಿಲ್ಲ.

You may also like

Leave a Comment