SSLC ಪರೀಕ್ಷೆಯಲ್ಲಿ ತಮ್ಮ ತಮ್ಮ ಶಾಲಾ ವಿದ್ಯಾರ್ಥಿಗಳ ಮುಖಾಂತರ ಒಳ್ಳೆಯ ರಿಸಲ್ಟ್ ತಂದರೆ ವಿದ್ಯಾರ್ಥಿಗಳು ಹೆಚ್ಚು ಅಂಕವನ್ನು ತೆಗೆಯುವಂತೆ ಮಾಡಿದರೆ ಆಯಾ ಶಾಲಾ ಶಿಕ್ಷಕರಿಗೆ ಬಂಪರ್ ಗಿಫ್ಟ್ ನೀಡಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಮಾಡಿದೆ.
ಹೌದು, ವರ್ಷ ಕಳೆದಂತೆ ಎಸ್ ಎಸ್ ಎಲ್ ಸಿ ರಿಸಲ್ಟ್ ನಲ್ಲಿ ಇಲ್ಲಿಗೆ ಕಾಣುತ್ತಿದೆ ಈ ಹಿನ್ನೆಲೆಯಲ್ಲಿ ಫಲಿತಾಂಶದಲ್ಲಿ ಸುಧಾರಣೆ ತರಲು ರಾಜ್ಯ ಸರ್ಕಾರವು ಮುಂದಾಗಿದೆ. ಇದೀಗ SSLC ಫಲಿತಾಂಶ ಸುಧಾರಣೆ ಮಾಡಿದ್ರೆ ಬಂಪರ್ ಗಿಫ್ಟ್ ಕೊಡುವುದಾಗಿ ಶಿಕ್ಷಕರಿಗೆ ಸರ್ಕಾರ ಸಿಹಿಸುದ್ದಿ ಕೊಟ್ಟಿದೆ.
ಸಿಎಂ ಸಿದ್ದರಾಮಯ್ಯ, ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 75% ಫಲಿತಾಶಂಶ ಸಾಧಿಸುವ ಗುರಿ ನೀಡಿದ್ದಾರೆ. ಈ ಹಿನ್ನಲೆ SSLC ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ಹೊಸ ಪ್ಲಾನ್ ಮಾಡಿದೆ. ಒಂದು ವೇಳೆ 10ನೇ ತರಗತಿ ವಾರ್ಷಿಕ ಪರೀಕ್ಷೆ ಫಲಿತಾಂಶ ಸುಧಾರಿಸುವ ಶಿಕ್ಷಕರಿಗೆ ಹೆಚ್ಚುವರಿ ಒಂದು ಸಾವಿರ ಪ್ರೋತ್ಸಾಹಧನ ನೀಡಲು ಮುಂದಾಗಿದೆ. ಈ ಮೂಲಕ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡಲು ಸರ್ಕಾರಿ ಶಾಲೆಗಳು ಮುಂದಾಗಿದ್ದು, SSLC ಫಲಿತಾಂಶ ಸುಧಾರಣೆಗೆ ಸರ್ಕಾರಿ ಶಾಲೆಗಳಿಂದ ಸರ್ಕಸ್ ನಡೆದಿದೆ. ಮುಂಜಾನೆ ಹಾಗೂ ಸಂಜೆ ಸ್ಪೆಷಲ್ ಕ್ಲಾಸ್ ಮಾಡಲು ಶಿಕ್ಷಕರು ಮುಂದಾಗಿದ್ದಾರೆ.
ಇಷ್ಟೇ ಅಲ್ಲದೆ ರಜಾ ದಿನಗಳಲ್ಲಿ ತರಗತಿಗಳನ್ನ ನಡೆಸಿ ಪಠ್ಯ ಕಂಪ್ಲೀಟ್ ಮಾಡಿ ಫಲಿತಾಂಶ ಸುಧಾರಿಸಲು ಶಿಕ್ಷಕರಿಗೆ ಹೆಚ್ಚುವರಿ ಪ್ರೊತ್ಸಾಹಧನ ನೀಡಲು ಇಲಾಖೆ ಮುಂದಾಗಿದೆ
