SSLC Grace Mark: ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ಗ್ರೇಸ್ ಮಾರ್ಕ್(SSLC Grace Mark) ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇಂದು ಸಿಎಂ, ಡಿಸಿಎಂ ನೇತೃತ್ವದಲ್ಲಿ ನಡೆದ ಸಭೆಯು ವಿಧಾನಸೌಧದಲ್ಲಿ ನಡೆದಿದು, ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದರ ಕುರಿತು, ಯಾವ ಕಾರಣ ಮತ್ತು ಉದ್ದೇಶದಿಂದ ಗ್ರೇಸ್ ಮಾರ್ಕ್ಸ್ ನೀಡಲಾಗಿದೆ ಈ ಕುರಿತು ತರಾಟೆ ತೆಗೆದುಕೊಳ್ಳಲಾಗಿದೆ.
ಅರ್ಹತೆಯ ಆಧಾರದಲ್ಲಿ ವಿದ್ಯಾರ್ಥಿಗಳು ಪ್ರಗತಿ ಸಾಧಿಸಬೇಕು. ಕಡಿಮೆ ಅಂಕ ಪಡೆದರೆ ವಿದ್ಯಾರ್ಥಿಗಳು ಅನರ್ಹರಾ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳನ್ನು ಪ್ರಶ್ನೆ ಮಾಡಿದ್ದಾರೆ.
ನಾನು ಕೂಡಾ 300 ಅಂಕ ಪಡೆದಿದ್ದೆ ಹಾಗೆಂದು ಅಸಮರ್ಥರು ಎಂದು ಭಾವಿಸುವಿರಾ? ಎಂದು ಡಿಸಿಎಂ ಡಿಕೆಶಿ ಪ್ರಶ್ನೆ ಮಾಡಿದರು.
ಶಿಕ್ಷಣ ಇಲಾಖೆ ಈ ಸಂದರ್ಭದಲ್ಲಿ ಕೋವಿಡ್ ಸಂದರ್ಭದಲ್ಲಿ 5-10 ಗ್ರೇಸ್ ಮಾರ್ಕ್ಸ್ ನೀಡಿದ್ದಾಗಿಯೂ, ಈಗ ಅದನ್ನು ಹೆಚ್ಚಳ ಮಾಡಿದ್ದೇವೆ ಎಂದು ಅಧಿಕಾರಿಗಳು ಹೇಳಿದರು. ಈಗ ಕೋವಿಡ್ ಇದೆಯೇನ್ರೀ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ: ಅಟಲ್ ಸೇತು ಕುರಿತು ವಿಡಿಯೋ ಮಾಡಿದ ರಶ್ಮಿಕಾ ಮಂದಣ್ಣ; ರಶ್ಮಿಕಾ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಮೋದಿ
