Home » Computer: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದಲೇ ‘ಕಂಪ್ಯೂಟರ್ ಶಿಕ್ಷಣ’: ಸಚಿವ ಮಧು ಬಂಗಾರಪ್ಪ ಘೋಷಣೆ

Computer: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದಲೇ ‘ಕಂಪ್ಯೂಟರ್ ಶಿಕ್ಷಣ’: ಸಚಿವ ಮಧು ಬಂಗಾರಪ್ಪ ಘೋಷಣೆ

0 comments

Computer: ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ಇನ್ಮುಂದೆ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು (Computer Education) ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಜವಾಹರಲಾಲ್ ನೆಹರು ತಾರಾಲಯದಲ್ಲಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಆಯೋಜಿಸಿದ್ದ “ಗಗನಯಾತ್ರಿ ಶುಭಾಂಶು ಶುಕ್ಲಾ ವಿದ್ಯಾರ್ಥಿ ಸಂವಾದ” ಕಾರ್ಯಕ್ರಮದಲ್ಲಿ ಅವರು ಮಾತನಾಡಿ, “ಪ್ರಸ್ತುತ ಯುಗವು ಕೃತಕ ಬುದ್ಧಿಮತ್ತೆ (AI) ಮತ್ತು ಕಂಪ್ಯೂಟರ್‌ಗಳ ಯುಗವಾಗಿದೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸರ್ಕಾರಿ ಶಾಲಾ ಮಕ್ಕಳು ಹಿಂದೆ ಉಳಿಯಬಾರದು ಎಂಬ ಉದ್ದೇಶದಿಂದ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ” ಎಂದು ಸಚಿವರು ತಿಳಿಸಿದರು.

“900 ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಕ 11 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ನೀಡಲು ಸಿದ್ಧತೆ ನಡೆಸಿದ್ದೇವೆ. ಶುಕ್ಲಾ ಅವರಂತಹ ಸಾಧಕರ ಕನಸುಗಳನ್ನು ನಮ್ಮ ಮಕ್ಕಳು ಮುಂದುವರಿಸಬೇಕಾದರೆ ಅವರಿಗೆ ಬಾಲ್ಯದಿಂದಲೇ ಭದ್ರ ಬುನಾದಿ ಹಾಕುವುದು ಶಿಕ್ಷಣ ಸಚಿವನಾಗಿ ನನ್ನ ಕರ್ತವ್ಯ,” ಎಂದು ಮಧು ಬಂಗಾರಪ್ಪ ಹೇಳಿದರು.

You may also like