Home » School Students: ದಸರಾ ರಜೆಯಲ್ಲಿರೋ ಮಕ್ಕಳಿಗೆ ಮತ್ತೊಂದು ಗುಡ್‌ನ್ಯೂಸ್‌ ಕೊಟ್ಟ ಸರ್ಕಾರ – ಈ ದಿನವೇ ಜಾರಿಗೆ ಆದೇಶ

School Students: ದಸರಾ ರಜೆಯಲ್ಲಿರೋ ಮಕ್ಕಳಿಗೆ ಮತ್ತೊಂದು ಗುಡ್‌ನ್ಯೂಸ್‌ ಕೊಟ್ಟ ಸರ್ಕಾರ – ಈ ದಿನವೇ ಜಾರಿಗೆ ಆದೇಶ

1 comment
School Students

School Students: ದೇಶದಲ್ಲಿ ನವರಾತ್ರಿ ಹಬ್ಬದ ಸಡಗರ ಮನೆ ಮಾಡಿದ್ದು, ಶಾಲಾ ಮಕ್ಕಳಿಗೆ ಈಗಾಗಲೇ ದಸರಾ ರಜೆಯನ್ನು ನೀಡಲಾಗಿದೆ. ಇದೇ ಸಮಯದಲ್ಲಿ ಕೇಂದ್ರ ಸರಕಾರ ದೇಶದಲ್ಲಿನ ಶಾಲಾ ಮಕ್ಕಳಿಗೆ ( School Students) ಗುಡ್‌ನ್ಯೂಸ್‌ ನೀಡಿದೆ.

ಶಿಕ್ಷಣ ಪದ್ದತಿಯಲ್ಲಿ ಈಗಾಗಲೇ ಹಲವು ರೀತಿಯಲ್ಲಿ ಬದಲಾವಣೆ ಗಳು ಸಂಭವಿಸಿವೆ. ಶಿಕ್ಷಣ ಇಲಾಖೆ ಹೊಸ ಪಠ್ಯಕ್ರಮಗಳನ್ನು ಅಳವಡಿಸಿಕೊಳ್ಳುತ್ತಿದೆ. ಹಲವು ರಾಜ್ಯಗಳು ಈಗಾಗಲೇ ಹೊಸ ಶಿಕ್ಷಣ ನೀತಿಯನ್ನು ಅಳವಡಿಸಿಕೊಂಡಿವೆ. ಈ ನಡುವಲ್ಲೇ ಕೇಂದ್ರ ಸರಕಾರ ಹೊಸ ಯೋಜನೆಯನ್ನು ಜಾರಿಗೆ ತರಲಿದೆ.

ಹೌದು, ರಾಷ್ಟ್ರೀಯ ಶಿಕ್ಷಣ ನೀತಿ (NEP) 2020 ರ ಭಾಗವಾಗಿ, ಕೇಂದ್ರ ಶಿಕ್ಷಣ ಸಚಿವಾಲಯವು ಪೂರ್ವ ಪ್ರಾಥಮಿಕದಿಂದ ಉನ್ನತ ಶಿಕ್ಷಣದವರೆಗೆ ಪ್ರತಿ ವಿದ್ಯಾರ್ಥಿಗೆ ‘ಸ್ವಯಂಚಾಲಿತ ಪರ್ಮನೆಂಟ್ ಅಕಾಡೆಮಿಕ್ ಅಕೌಂಟ್ ರಿಜಿಸ್ಟ್ರಿ (APAAR) ಎಂಬ ‘ಒಂದು ರಾಷ್ಟ್ರ, ಒಂದು ವಿದ್ಯಾರ್ಥಿ ID(One Nation One ID)’ ಯೋಜನೆ ಜಾರಿಗೆ ಬರಲಿದೆ.

ಕೇಂದ್ರದ ಶಿಕ್ಷಣ ಇಲಾಖೆ ರಾಷ್ಟ್ರೀಯ ಶಿಕ್ಷಣ ನೀತಿಯ ಭಾಗವಾಗಿ ದೇಶದಾದ್ಯಂತ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದ ವರೆಗೆ ಶಾಶ್ವತ ಶಿಕ್ಷಣ ಖಾತೆ ನೋಂದಣಿಯ( APAAR) ಗುರುತಿನ ಸಂಖ್ಯೆಯನ್ನು ವಿದ್ಯಾರ್ಥಿಗಳಿಗೆ ನೀಡಲಿದೆ. ಎಐಸಿಟಿಇ ಅಧ್ಯಕ್ಷ ಸೀತರಾಮನ್‌ ಅವರು ಈ ಕುರಿತು ಮಾಹಿತಿಯನ್ನು ನೀಡಿದ್ದಾರೆ.

ಒನ್‌ ನೇಷನ್‌ ಒನ್‌ ಸ್ಟೂಡೆಂಟ್‌ ಐಡಿ ದೇಶದ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಜಾರಿಗೆ ಬರಲಿದೆ. ಎಜುಕೇಶನ್‌ ಐಡಿಯ ಮೂಲಕ ವಿದ್ಯಾರ್ಥಿಗಳು ತಮ್ಮ ಎಲ್ಲಾ ದಾಖಲೆಗಳನ್ನು ಒಂದೇ ಕಡೆಯಲ್ಲಿ ಇರಿಸಿಕೊಳ್ಳಬಹುದು. ಈ ಯೋಜನೆಯಿಂದಾಗಿ ಆಧಾರ್‌ ಸಂಖ್ಯೆ, ಪ್ಯಾನ್‌ ಸಂಖ್ಯೆಯಂತೆಯೇ ಇನ್ಮುಂದೆ ವಿದ್ಯಾರ್ಥಿಗಳಿಗೂ ಒಂದೊಂದು ಕೋಡ್‌ ನೀಡುವುದರಿಂದ ವಿದ್ಯಾರ್ಥಿಗಳ ದಾಖಲೆಗಳನ್ನು ಸುಲಭವಾಗಿ ಟ್ರ್ಯಾಕ್‌ ಮಾಡಲು ಸಾಧ್ಯವಾಗುತ್ತದೆ. ಈ ಯೋಜನೆಯನ್ನು ದೇಶದಾದ್ಯಂತ ಜಾರಿ ಮಾಡುವ ನಿಟ್ಟಿನಲ್ಲಿ ಕೇಂದ್ರ ಶಿಕ್ಷಣ ಇಲಾಖೆ ಕ್ರಮವಹಿಸಿದೆ.

ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ ಹೆಚ್ಚಳ – ವಾಹನ ಸವಾರರು ಕಂಗಾಲು

You may also like

Leave a Comment