Education News: ಎಸೆಸೆಲ್ಸಿ(SSLC)ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ, ನಿಮಗೊಂದು ಮುಖ್ಯ ಮಾಹಿತಿ ಇಲ್ಲಿದೆ.ಶಾಲಾ ಶಿಕ್ಷಣ ಇಲಾಖೆ 2023-24ನೇ ಸಾಲಿನಲ್ಲಿ ನಡೆಯಲಿರುವ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ನೋಂದಾವಣಿ ಮಾಡಿಕೊಳ್ಳಲು ಅರ್ಜಿ ಆಹ್ವಾನ ಮಾಡಲಾಗಿದ್ದು, ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ(Education news ).
ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಪ್ರೌಢ ಶಾಲೆ ಮತ್ತು ಕಾಲೇಜುಗಳಿಂದ ಹಾಜರಾಗುವ ಶಾಲಾ, ಖಾಸಗಿ, ಪುನರಾವರ್ತಿತ ಅರ್ಹ ವಿದ್ಯಾರ್ಥಿಗಳನ್ನು ನೋಂದಾಯಿಸಲು ಅರ್ಜಿ ಆಹ್ವಾನ ಮಾಡಲಾಗಿದೆ. ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ಕ್ಕೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿಯನ್ನು ಮಂಡಳಿಯ ಜಾಲತಾಣ https://kseab.karnataka.gov.in ನಲ್ಲಿ ಬಿಡುಗಡೆ ಮಾಡಲಾಗಿದೆ. ವಿದ್ಯಾರ್ಥಿಗಳು ಈ ಜಾಲತಾಣದ ಮೂಲಕ ಪರಿಶೀಲಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಪರೀಕ್ಷಾ ನಿರ್ದೇಶಕರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Dasara holidays: ಈ ಜಿಲ್ಲೆಯ ಶಾಲೆಗಳಿಗೆ ದಸರಾ ರಜೆಯಲ್ಲಿ ಬದಲಾವಣೆ- ಮಹತ್ವದ ಆದೇಶ ಹೊರಡಿಸಿದ ಜಿಲ್ಲಾಡಳಿತ
