Home Education ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಗೆ ಮಾರ್ಗಸೂಚಿ

ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಗೆ ಮಾರ್ಗಸೂಚಿ

0
4
Karnataka SSLC and Second Puc Exam

ಬೆಂಗಳೂರು: ಎಸ್ಸೆಸ್ಸೆಲ್ಸಿ ಪೂರ್ವಸಿದ್ದತಾ ಪರೀಕ್ಷೆ-1 ಪ್ರಶ್ನೆ ಪತ್ರಿಕೆಗಳ ಸೋರಿಕೆ ಬೆನ್ನಲ್ಲೇ ಎಚ್ಚೆತ್ತ ಶಾಲಾ ಶಿಕ್ಷಣ ಇಲಾಖೆ, ಎರಡು ಮತ್ತು ಮೂರನೇ ಪೂರ್ವಸಿದ್ಧತಾ ಪರೀಕ್ಷೆಗೆ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಗೆ ಬದಲಾಗಿ ಶಾಲಾ ಶಿಕ್ಷಣ ಆಯುಕ್ತರ ನೇತೃತ್ವದಲ್ಲಿ ಉಳಿದ ಎರಡು ಪೂರ್ವಸಿದ್ಧತಾ ಪರೀಕ್ಷೆಗಳನ್ನು ನಡೆಸಲು ಇಲಾಖೆ ಸುತ್ತೋಲೆ ಹೊರಡಿಸಿದೆ.

ಡಿಡಿಪಿಐ, ಬಿಇಒಗಳಿಗೆ ಪರೀಕ್ಷೆ ಜವಾಬ್ದಾರಿ ನೀಡಲಾಗಿದ್ದು, ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮ ನಡೆಯದಂತೆ ನಿಗಾ ಇಡಲು ಸೂಚಿಸಲಾಗಿದೆ. ಪರೀಕ್ಷೆ ವೇಳೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಮೊಬೈಲ್ ಬಳಸಬಾರದು. ಪರೀಕ್ಷೆಗೂ ಮುನ್ನ ಯಾವುದೇ ಪ್ರಶ್ನೆ ಪತ್ರಿಕೆ ಸ್ವೀಕರಿಸುವುದು, ಹಂಚಿಕೊಳ್ಳುವುದು ಮಾಡಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಪರೀಕ್ಷೆಯ ದಿನವೇ ಮುಖ್ಯೋಪಾಧ್ಯಾಯರು ಪ್ರಶ್ನೆ ಪತ್ರಿಕೆಗಳನ್ನು ಡೌನ್‌ಲೋಡ್ ಮಾಡಬೇಕು. ಪ್ರಶ್ನೆ ಪತ್ರಿಕೆ ಗೌಪ್ಯತೆ ಕಾಪಾಡಬೇಕು. ಡಯಟ್ ಪ್ರಾಂಶುಪಾಲರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಇಲಾಖೆ ನಿರ್ದೇಶನ ನೀಡಿದೆ. ಬೆಳಗ್ಗೆ 9 ಗಂಟೆಗೆ ವಿದ್ಯಾರ್ಥಿಗಳು ಶಾಲೆಯಲ್ಲಿ ಹಾಜರಿರಬೇಕು. ಬೆಳಗ್ಗೆ 9.30ಕ್ಕೆ ಪ್ರಶ್ನೆ ಪತ್ರಿಕೆ ಡೌನ್‌ಲೋಡ್, ಮದ್ರಣ ಮುಗಿಸಬೇಕು. 10 ರಿಂದ 10.30ರವರೆಗೆ ಡೌನ್‌ ಲೋಡ್ ಮಾಡಿದ ಪ್ರಶ್ನೆ ಪತ್ರಿಕೆಗಳ ಪ್ಯಾಕಿಂಗ್ ಮುಗಿಸಬೇಕು. ಬಳಿಕ 11 ಗಂಟೆಗೆ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಪ್ರಶ್ನೆ ಪತ್ರಿಕೆ ಪ್ಯಾಕೆಟ್ ತೆರೆದು ಪರೀಕ್ಷೆ ಆರಂಭಿ ಸಬೇಕು ಎಂದು ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ