Home » Karnataka DCET 2023: ಡಿಪ್ಲೊಮ ಸಿಇಟಿ 2023 ಕ್ಕೆ ಅರ್ಜಿ ಆಹ್ವಾನ: ‘ಕೆಇಎ’ ಯಿಂದ ಮಹತ್ವದ ಪ್ರಕಟಣೆ

Karnataka DCET 2023: ಡಿಪ್ಲೊಮ ಸಿಇಟಿ 2023 ಕ್ಕೆ ಅರ್ಜಿ ಆಹ್ವಾನ: ‘ಕೆಇಎ’ ಯಿಂದ ಮಹತ್ವದ ಪ್ರಕಟಣೆ

0 comments

Karnataka DCET 2023: ಸರ್ಕಾರದ ಆದೇಶದ ಅನ್ವಯ 2023-24 ನೇ ಸಾಲಿನ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಡಿಪ್ಲೊಮ ಸಾಮಾನ್ಯ ಪ್ರವೇಶ ಪರೀಕ್ಷೆ (Karnataka DCET 2023) ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಹತ್ವದ ಪ್ರಕಟಣೆಯನ್ನು ಹೊರಡಿಸಿದೆ.

ಪ್ರಸ್ತುತ 2023-24ನೇ ಸಾಲಿಗೆ ಪ್ರಾಧಿಕಾರವು ಹಲವು ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶಾತಿಗೆ ಅರ್ಹ ಡಿಪ್ಲೊಮ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಈ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಹತೆ ಪಡೆಯಲು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ 2023ರ ಸಾಮಾನ್ಯ ಪ್ರವೇಶ ಪರೀಕ್ಷೆಗೆ (Diploma common Entrance Test) ಹಾಜರಾಗಬೇಕು.

ಸದ್ಯ ಮೂರು ವರ್ಷಗಳ ಡಿಪ್ಲೊಮ ಇಂಜಿನಿಯರಿಂಗ್ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡಿ ಅರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್‌ನ ಇಂಜಿನಿಯರಿಂಗ್ ಕೋರ್ಸ್‌ಗಳಿಗೆ ನೇರವಾಗಿ ಯಾವುದೇ ಇಂಜಿನಿಯರಿಂಗ್ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ಪ್ರಮುಖ ದಿನಾಂಕಗಳು:
ನೋಂದಣಿ ಹಾಗೂ ಆನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡಲು ಆರಂಭ ದಿನಾಂಕ- 31-08-2023.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ – 13-08-2023.

ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ – 14-08-2023.

ಡಿಸಿಇಟಿ-2023 ಕ್ಕೆ ಪ್ರವೇಶ ಪತ್ರ ಬಿಡುಗಡೆ ದಿನಾಂಕ – ನಂತರ ತಿಳಿಸಲಾಗುವುದು.

ಡಿಸಿಇಟಿ-2023 ಪ್ರವೇಶ ಪರೀಕ್ಷೆ ದಿನಾಂಕ- 10-09-2023.

ಡಿಪ್ಲೊಮ ಸಿಇಟಿ -2023 ರ ಅರ್ಜಿ ನಮೂನೆಯಲ್ಲಿ ಜಾತಿ / ವರ್ಗ ಮತ್ತು ವಾರ್ಷಿಕ ಆಧಾಯದ ಬಗ್ಗೆ ಒದಗಿಸಿರುವ ಮಾಹಿತಿಯು ವಿದ್ಯಾರ್ಥಿಗಳಿಗೆ ರಾಂಕ್ ನೀಡುವುದಕ್ಕೆ/ ಸೀಟು ಆಯ್ಕೆ ಮಾಡುವುದಕ್ಕೆ ಪರಿಗಣಿಸಲಾಗುವುದು ಮತ್ತು ಯಾವುದೇ ಕಾರಣಕ್ಕೂ ಬದಲಾಯಿಸಲು ಅವಕಾಶವಿರುವುದಿಲ್ಲ.

ಇನ್ನು ಜಾತಿ, ವರ್ಗ ಮತ್ತು ಕಲ್ಯಾಣ ಕರ್ನಾಟಕದ ಮೀಸಲಾತಿ ಕೋರಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ತಮ್ಮ ಆನ್‌ಲೈನ್‌ ಅರ್ಜಿ ನಮೂನೆಯಲ್ಲಿ ತಪ್ಪದೆ ಆರ್‌ಡಿ ಸಂಖ್ಯೆಯನ್ನು ನಮೂದಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ https://cetonline.karnataka.gov.in/kea/ ಗೆ ಭೇಟಿ ನೀಡಬಹುದಾಗಿದೆ.

ಮುಖ್ಯವಾಗಿ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಡಿಪ್ಲೊಮ ಸಿಇಟಿ-2023ಕ್ಕೆ ದಾಖಲಿಸಿದ ಎಲ್ಲಾ ಮಾಹಿತಿಗಳನ್ನು ಅಂತಿಮ ಎಂದು ಪರಿಗಣಿಸಲಾಗುತ್ತದೆ. ಮತ್ತು ಈ ಮಾಹಿತಿಯೇ ಮುಂದಿನ ಎಲ್ಲಾ ಪ್ರಕ್ರಿಯೆಗಳಿಗೆ ಆಧಾರವಾಗಿರುತ್ತದೆ ಹಾಗೂ ಯಾವುದೇ ಕಾರಣಕ್ಕೂ ದಾಖಲಿಸಿದ ಮಾಹಿತಿಯನ್ನು ಬದಲಾಯಿಸಲು ಅವಕಾಶವಿರುವುದಿಲ್ಲ.

ಇದನ್ನೂ ಓದಿ: ಗೃಹಜ್ಯೋತಿ ಯೋಜನೆ; ನೀವೇನಾದರೂ ಜೂ.25ರ ನಂತರ ನೋಂದಣಿ ಮಾಡಿಸಿದ್ದೀರಾ? ಹಾಗಾದರೆ ಈ ಮಾಹಿತಿ ನಿಮಗಾಗಿ!!!

You may also like

Leave a Comment