4
Karnataka: ನವೆಂಬರ್ 28ರಂದು 5 ಸಾವಿರ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ತಿಳಿಸಿದ್ದಾರೆ.
ಸಮಗ್ರ ಶಿಶು ಅಭಿವೃದ್ಧಿ ಸೇವೆಗಳ ಯೋಜನೆಗೆ 50 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ನವೆಂಬರ್ 28ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 5 ಸಾವಿರ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವುದು ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಪೂರಕ ಮಹತ್ತರ ಮೂರು ಯೋಜನೆಗಳಿಗೆ ಚಾಲನೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಳರ್ ತಿಳಿಸಿದ್ದಾರೆ.
