KCET Result 2025: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ನಾಳೆ ಮೇ 24ರಂದು ಪ್ರಕಟವಾಗಲಿದೆ.
ಶನಿವಾರ ಬೆಳಗ್ಗೆ 11.30 ಕ್ಕೆ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರು ಪ್ರಕಟ ಮಾಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು.
cetonline.karnataka.gov.in ಅಥವಾ kea.kar.nic.in ನಲ್ಲಿ ಫಲಿತಾಂಶವನ್ನು ನೋಡಬಹುದು.
ಸಿಇಟಿ ಫಲಿತಾಂಶ ಪರಿಶೀಲಿಸುವುದು ಹೇಗೆ?
ಮೊದಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ಪೋರ್ಟಲ್ https://cetonline.karnataka.gov.in/kea ಗೆ ಭೇಟಿ ನೀಡಿ
ಮುಖಪುಟದಲ್ಲಿ KCET ಫಲಿತಾಂಶಗಳು 2024 ಎಂಬ ಲಿಂಕನ್ನು ಕ್ಲಿಕ್ ಮಾಡಿ
ನಿಮ್ಮ ಹೆಸರಿನ ಮೊದಲ ನಾಲ್ಕು ಅಕ್ಷರಗಳೊಂದಿಗೆ ನಿಮ್ಮ KCET ನೋಂದಣಿ ಸಂಖ್ಯೆಯನ್ನು ನಮೂದು ಮಾಡಬೇಕು.
ನಂತರ Submit ಮೇಲೆ ಕ್ಲಿಕ್ ಮಾಡಿ.
ಸಿಇಟಿ ಫಲಿತಾಂಶದ ನಂತರ ಕೆಇಎ ಮೆರಿಟ್ ಪಟ್ಟಿಯನ್ನು ಪ್ರಕಟ ಮಾಡುತ್ತದೆ. ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಪ್ರಾರಂಭ ಮಾಡುತ್ತದೆ. ಇದರಲ್ಲಿ ನೋಂದಣಿ, ಆಯ್ಕೆ ಭರ್ತಿ, ಸೀಟು ಹಂಚಿಕೆ, ದಾಖಲೆ ಪರಿಶೀಲನೆ ನಡೆಯಲಿದೆ.
