Heat Wave: ಹಲವೆಡೆ ಭಾರಿ ಮಳೆಯ ತೊಂದರೆ ಅನುಭವಿಸುತ್ತಿದ್ದು ಮಳೆಯ ಅವಾಂತರ ಸೃಷ್ಟಿ ಆಗಿದೆ. ಆದರೆ ಬಿಹಾರದ ಪಾಟ್ನಾ ಜಿಲ್ಲೆಯಲ್ಲಿ ಇತ್ತೀಚಿಗೆ ಉಷ್ಣಾಂಶದಲ್ಲಿ (Heat wave) ಭಾರಿ ಏರಿಕೆಯಾಗಿದ್ದು, ಬಿಸಿಗಾಳಿಯಿಂದ ಜನ ತತ್ತರಿಸಿ ಹೋಗಿದ್ದಾರೆ. ಜನಜೀವನ ಅಸ್ತವ್ಯಸ್ತವಾಗಿದೆ.
ಸದ್ಯ ಬಿಹಾರದ ಪಾಟ್ನಾ ಜಿಲ್ಲೆಯಲ್ಲಿ ಉಷ್ಣಾಂಶದಲ್ಲಿ ಭಾರಿ ಏರಿಕೆ ಹಿನ್ನೆಲೆ 12ನೇ ತರಗತಿಯವರೆಗಿನ ಎಲ್ಲ ಶೈಕ್ಷಣಿಕ ಚಟುವಟಿಕೆಗಳನ್ನು ಜೂನ್ 24ರವರೆಗೆ ಸ್ಥಗಿತಗೊಳಿಸಿರುವುದಾಗಿ ಇತ್ತೀಚೆಗೆ ಪಾಟ್ನಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಆದೇಶ ಹೊರಡಿಸಿತ್ತು. ಇದೀಗ ಬಿಸಿಗಾಳಿಯ ಪ್ರಭಾವ ಕಡಿಮೆಯಾಗದ ಹಿನ್ನೆಲೆಯಲ್ಲಿ ಜೂನ್ 28 ರವರೆಗೂ ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಿಸಿ ಮರು ಆದೇಶ ಹೊರಡಿಸಲಾಗಿದೆ.
ಜಿಲ್ಲೆಯಲ್ಲಿ ಹೆಚ್ಚಿನ ತಾಪಮಾನ ಇರುವ ಕಾರಣ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಆದ್ದರಿಂದ, 12ನೇ ತರಗತಿಯವರೆಗೆ ಅಪರಾಧ ಪ್ರಕ್ರಿಯಾ ಸಂಹಿತೆ 1973 ರ ಸೆಕ್ಷನ್ 144ರ ಅಡಿಯಲ್ಲಿ ಪಾಟ್ನಾದ ಎಲ್ಲ ಖಾಸಗಿ ಮತ್ತು ಸರ್ಕಾರಿ ಶಾಲೆಗಳ (ಪ್ರಿ-ಸ್ಕೂಲ್ ಮತ್ತು ಅಂಗನವಾಡಿ ಕೇಂದ್ರಗಳು ಸೇರಿದಂತೆ) ಶೈಕ್ಷಣಿಕ ಚಟುವಟಿಕೆಗಳನ್ನು ನಿಷೇಧಿಸುತ್ತಿದ್ದೇವೆ.
ಸದ್ಯ ಈ ಆದೇಶವು ಜೂನ್ 26, 2023 ರಿಂದ ಜಾರಿಗೆ ಬರಲಿದ್ದು, 28 ರವರೆಗೆ ಜಾರಿಯಲ್ಲಿರುತ್ತದೆ” ಎಂದು ಜಿಲ್ಲಾಧಿಕಾರಿ ಡಾ. ಚಂದ್ರ ಶೇಖರ್ ಸಿಂಗ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: Rain Alert: ಕರಾವಳಿ ಜನತೆಗೆ ಎಚ್ಚರ! 3 ಜಿಲ್ಲೆಗಳಲ್ಲಿ ಭಾರೀ ಮಳೆಯ ಆರೆಂಜ್ ಅಲರ್ಟ್
