Childrens day: : ನ.14 ರಂದು ಮಕ್ಕಳ ದಿನಾಚರಣೆ ಪ್ರಯುಕ್ತ ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಪೋಷಕ-ಶಿಕ್ಷಕರ ಮಹಾಸಭೆ ನಡೆಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (SDMC) ಅಧ್ಯಕ್ಷರು ಮತ್ತು ಸದಸ್ಯರಿಗಾಗಿ ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ನಡೆಸಿದ ವಿಡಿಯೋ ಕಾನ್ಫರೆನ್ಸ್ ಸಂವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ಮಾಜಿ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ಜವಾಹರ್ ಲಾಲ್ ನೆಹರೂ ಅವರ ಜನ್ಮದಿನದ ಅಂಗವಾಗಿ ನವೆಂಬರ್ 14 ರಂದು ನಡೆಯಲಿರುವ “ಮಕ್ಕಳ ದಿನಾಚರಣೆ”ಯನ್ನು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯದ ಸುಮಾರು 56,000 ಶಾಲೆ/ಕಾಲೇಜುಗಳಲ್ಲಿ ‘ಮೆಗಾ ಪಿಟಿಎಂ’ (ಪೋಷಕ-ಶಿಕ್ಷಕರ ಸಭೆ) ನೆಡಸಲಿದ್ದು, ಅಂದು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ವಿಶೇಷ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯ ಮಟ್ಟದಲ್ಲಿ ಮಕ್ಕಳ ದಿನಾಚಾರಣೆಯನ್ನು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದು, ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು, ಪೋಷಕರು ಹಾಗೂ ಎಸ್.ಡಿ.ಎಂ.ಸಿ ಯವರೊಂದಿಗೆ ಪೋಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ ಇದಕ್ಕೆ ಸಂಪೂರ್ಣ ಬೆಂಬಲ ನೀಡಿ ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ಮನವಿ ಮಾಡಿದರು.
Childrens day: ನ.14 ರಂದು ಮಕ್ಕಳ ದಿನಾಚರಣೆ ಪ್ರಯುಕ್ತ ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ‘ಪೋಷಕ-ಶಿಕ್ಷಕರ ಮಹಾಸಭೆ’: ಸಚಿವ ಮಧು ಬಂಗಾರಪ್ಪ
13
