7
2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಖಾಸಗಿ ವಿದ್ಯಾರ್ಥಿಗಳ ನೋಂದಣಿ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ.
ದ್ವಿತೀಯ ಪಿಯುಸಿ ಪರೀಕ್ಷೆ-1ರ ಖಾಸಗಿ ಅಭ್ಯರ್ಥಿಗಳ ನೋಂದಣಿಗೆ ಡಿ.12ರವರೆಗೆ ಪರೀಕ್ಷಾ ಶುಲ್ಕದ ಜತೆಗೆ, 2,520 ರೂ. ದಂಡ ಶುಲ್ಕ ಪಾವತಿಗೆ ಅವಕಾಶ ನೀಡಲಾಗಿತ್ತು. ಸದ್ಯ ಪೋಷಕರ ಮನವಿ ಮೇರೆಗೆ ಡಿ.31ರವರೆಗೆ ಖಾಸಗಿ ಅಭ್ಯರ್ಥಿಗಳ ನೋಂದಣಿಗೆ ಅವಕಾಶ ನೀಡಿರುವುದಾಗಿ ಇಲಾಖೆ ಪ್ರಕಟಣೆ ಹೊರಡಿಸಿದೆ.
ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಲು ಡಿ. 18ರಿಂದ 31ರವರೆಗೆ ಕಾಲಾವಕಾಶ ನೀಡಲಾಗಿದ್ದು, ಪ್ರಾಂಶುಪಾಲರು ಅರ್ಜಿಗಳಿಗೆ ಅನುಮೋದನೆ ನೀಡಲು ಜ.1 ರವರೆಗೆ ಸಮಯ ನೀಡಲಾಗಿದೆ.
