Home » ‘PUC’ ಪ್ರವೇಶ ಪಡೆಯುವ ವಿದ್ಯಾರ್ಥಿಗಳೇ ಗಮನಿಸಿ |  ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ

‘PUC’ ಪ್ರವೇಶ ಪಡೆಯುವ ವಿದ್ಯಾರ್ಥಿಗಳೇ ಗಮನಿಸಿ |  ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ

by Mallika
0 comments

ಬೆಂಗಳೂರು : 2022-23ನೇ ಸಾಲಿನಲ್ಲಿ ಪದವಿ ಪೂರ್ವ ಕಾಲೇಜುಗಳಿಗೆ ದಾಖಲಾತಿ ಮಾಡಿಕೊಳ್ಳುವ ಮುನ್ನ ವಿದ್ಯಾರ್ಥಿಗಳು, ಪೋಷಕರು ಆಯಾ ಕಾಲೇಜುಗಳು ಅಸ್ತಿತ್ವದಲ್ಲಿರುತ್ತದೆಯೇ ಅಥವಾ ಮಾನ್ಯತೆ ಪಡೆದಿದೆಯೇ ಎಂಬುದನ್ನು ಖಚಿತ ಪಡಿಸಿಕೊಂಡ ನಂತರವೇ ದಾಖಲಾತಿ ಮಾಡಿಕೊಳ್ಳಬೇಕು.

ಪದವಿ ಪೂರ್ವ ಶಿಕ್ಷಣ ಇಲಾಖೆಯ www.pue.karnataka.gov.in ನಲ್ಲಿ ಸೂಚಿಸಿರುವ ಕಾಲೇಜುಗಳಿಗೆ ಮಾತ್ರ ದಾಖಲಾತಿ ಪಡೆದುಕೊಳ್ಳಬೇಕು. ಕಾಲೇಜುಗಳು ಅಸ್ತಿತ್ವದಲ್ಲಿರುವ ಬಗ್ಗೆ ಕಾಲೇಜು ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಮಾನ್ಯತೆ ಪಡೆದಿದೆಯೇ ಎಂಬುದನ್ನು ಖಚಿತಪಡಿಸಿಕೊಂಡ ನಂತರ ಪ್ರವೇಶ ಪಡೆಯಬಹುದು. ಹೆಚ್ಚಿನ ವಿವರಗಳಿಗೆ ದೂ.ಸಂ. 0836-2740277 ಸಂಪರ್ಕಿಸಬಹುದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೃಷ್ಣಾ ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

Leave a Comment