Home » ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ | ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ !!!

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ | ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ !!!

by Mallika
0 comments

ದ್ವಿತೀಯ ಪಿಯುಸಿ (Second PUC) ಮರು ಮೌಲ್ಯಮಾಪನ (Revaluation) ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯನ್ನು ರಾಜ್ಯ ಸರ್ಕಾರ (Karnataka Government) ಮತ್ತು ಶಿಕ್ಷಣ ಇಲಾಖೆ ಮಾಡಿದ್ದೂ, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ‘ಒಂದು ಅಂಕ’ ಹೆಚ್ಚು ಬಂದರೂ ಅದನ್ನು ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. 2023ರ ಮಾರ್ಚ್ ನಲ್ಲಿ ನಡೆಯುವ ಪರೀಕ್ಷೆಯಿಂದಲೇ ಈ ಹೊಸ ನಿಯಮ ಅನ್ವಯವಾಗಲಿದೆ.

ಹಾಲಿ ಇರುವ ನಿಯಮದ ಪ್ರಕಾರ, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗೆ ಪತ್ರಿಕೆಯ ಒಟ್ಟು ಅಂಕದ ಶೇ.6ರಷ್ಟು ಅಂಕ ಅಥವಾ ಅದಕ್ಕಿಂತ ಹೆಚ್ಚು ಅಂಕಗಳು ಬಂದಲ್ಲಿ ಮಾತ್ರ ಪರಿಗಣಿಸಲಾಗುತ್ತಿತ್ತು. ಶೇ.6ಕ್ಕಿಂತ ಕಡಿಮೆ ಅಂಕಗಳು ಬಂದಲ್ಲಿ ಪರಿಗಣಿಸುತ್ತಿರಲಿಲ್ಲ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಂದು ಅಂಕವು ಮುಖ್ಯವಾಗಿರುತ್ತದೆ. ಹಾಗಾಗಿ ‘ಒಂದು ಅಂಕ’ವನ್ನೂ ಪರಿಗಣಿಸುವ ‘ವಿದ್ಯಾರ್ಥಿ ಸ್ನೇಹಿ’ ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಬಿ.ಸಿ ನಾಗೇಶ್ ( Minister BC Nagesh ) ಅವರು ಈ ಕುರಿತಂತೆ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಶೀಘ್ರದಲ್ಲೇ ‘ಕರ್ನಾಟಕ ಪದವಿಪೂರ್ವ ಶಿಕ್ಷಣ ರಾಜ್ಯ ಮಟ್ಟದ ಪಬ್ಲಿಕ್ ಪರೀಕ್ಷೆ ನಿಯಮಗಳು-1997’ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

You may also like

Leave a Comment