Home » Actor Darshan: ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಬಂಧನ

Actor Darshan: ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಬಂಧನ

0 comments
Actor Darshan

Actor Darshan: ಭಾರೀ ಸೆನ್ಸೇಷನ್‌ ಸುದ್ದಿಯೊಂದು ಹೊರಬಿದ್ದಿದ್ದು, ನಟ ದರ್ಶನ್‌ ಕೊಲೆ ಕೇಸಿನಲ್ಲಿ ಅರೆಸ್ಟ್‌ ಆಗಿದ್ದಾರೆ. ಇತ್ತೀಚೆಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಬೆನ್ನತ್ತಿದ ಪೊಲೀಸರಿಗೆ ದರ್ಶನ್‌ ಆಪ್ತೆ ಪವಿತ್ರಾ ಗೌಡಗೆ ಈ ವ್ಯಕ್ತಿ ಅಶ್ಲೀಲ ಮೆಸೇಜ್‌ ಮಾಡಿದ್ದು, ದರ್ಶನ್‌ ಸೂಚನೆ ಮೇರೆಗೆ ರೇಣುಕಾಸ್ವಾಮಿ ಕೊಲೆ ಮಾಡಲಾಗಿದೆಯೆಂದು ಪೊಲೀಸರಿಗೆ ಮಾಹಿತಿ ದೊರಕಿದೆ.

ಚಾಲೆಂಜಿಂಗ್‌ ಸ್ಟಾರ್‌ ನಟ ದರ್ಶನ್‌ ಅವರನ್ನು ಮೈಸೂರಿನಲ್ಲಿ ಪೊಲೀಸರು ಬಂಧನ ಮಾಡಿರುವ ಕುರಿತು ವರದಿಯಾಗಿದೆ.

ಕೊಲೆ ಪ್ರಕರಣದಲ್ಲಿ ದರ್ಶನ್‌ ಅವರನ್ನು ಬಂಧನ ಮಾಡಲಾಗಿದೆ.

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ನಟ ದರ್ಶನ್‌ ಅವರನ್ನು ಬಂಧನ ಮಾಡಲಾಗಿದೆ ಎನ್ನುವುದಾಗಿ ವರದಿಯಾಗಿದೆ.

ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್‌ ಅವರ ಸೂಚನೆಯ ಮೇರೆಗೆ ಈ ಕೊಲೆ ನಡೆದಿದೆ ಎನ್ನಲಾಗಿದೆ.

ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. ಈ ಕೊಲೆ ದರ್ಶನ್‌ ಸೂಚನೆಯ ಮೇರೆಗೆ ಮಾಡಲಾಗಿತ್ತು ಎಂದು ಈ ಕೊಲೆ ಪ್ರಕರಣದ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಹಾಗೂ ಘಟನೆ ವೇಳೆ ಸ್ಥಳದಲ್ಲಿ ದರ್ಶನ್‌ ಕೂಡಾ ಇದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ದರ್ಶನ್‌ ಸೇರಿ 10 ಜನರನ್ನು ಬಂಧಿಸಲಾಗಿದೆ.

ಮಾಹಿತಿ ಅಪ್ಡೇಟ್‌ ಮಾಡಲಾಗುತ್ತದೆ

You may also like

Leave a Comment