ಬೆಂಗಳೂರು: ಬಿಗ್‌ಬಾಸ್ ಕನ್ನಡ ಸೀಸನ್ 12 ಗೆದ್ದ ನಂತರ ಗಿಲ್ಲಿ ನಟ ಅವರು ಇದೀಗ ಸಿಎಂ ಅವರನ್ನು ಭೇಟಿ ಆಗಿದ್ದಾರೆ.
ಗಿಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಸರಕಾರಿ ನಿವಾಸ ಕಾವೇರಿಯಲ್ಲಿ ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಹಾರವನ್ನು ಹಾಕಿ ಅಭಿನಂದನೆ ಸಲ್ಲಿಸಿದ್ದಾರೆ.

ಸಿಎಂ ಅವರು ಗಿಲ್ಲಿಗೆ ವಿಶೇಷ ಅಭಿನಂದನೆ ಸಲ್ಲಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಗಿಲ್ಲಿ-ಸಿಎಂ ಭೇಟಿಯ ಫೋಟೋಗಳು ವೈರಲ್ ಆಗಿದೆ. ಗಿಲ್ಲಿ ಸಿಎಂ ಭೇಟಿ ಸಂದರ್ಭದಲ್ಲಿ ಸಚಿವ ಭೈರತಿ ಸುರೇಶ್, ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಮುಂತಾದವರು ಉಪಸ್ಥಿತರಿದ್ದರು.















