1
Ganiga Ravikumar: ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನಿಸಲೆಂದು ಹೋದ ಸಂದರ್ಭದಲ್ಲಿ ನನ್ನ ಮನೆ ಇರೋದು ಹೈದರಾಬಾದ್‌ನಲ್ಲಿ, ಕರ್ನಾಟಕ ಎಲ್ಲಿದೆ ಎಂದು ಗೊತ್ತಿಲ್ಲ ಅಂದಿದ್ರು ಎಂದು ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ.
ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾದಿಂದ ಬಂದವರು, ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನ ಮಾಡಿದ್ವಿ. ಆದರೆ ನಾನು ಇರುವುದು ಹೈದರಾಬಾದ್‌ನಲ್ಲಿ ಇರೋದು, ನನಗೆ ಕರ್ನಾಟಕ ಎಲ್ಲಿದೆ ಅಂತಾ ಗೊತ್ತಿಲ್ಲ, ಟೈಂ ಇಲ್ಲ, ಬರಲ್ಲ ಎಂದು ಹೇಳಿದ್ದರು, ಇವರಿಗೆ ಬುದ್ಧಿ ಕಲಿಸಬೇಕಲ್ವಾ? ಎಂದು ವಿಧಾನಸೌಧದಲ್ಲಿ ಮಾತನಾಡುತ್ತಾ ಹೇಳಿದರು.
ಸಿನಿಮಾ ಸಬ್ಸಿಡಿಗಳನ್ನು ನಿಲ್ಲಿಸುವ ಕುರಿತು ನಾನು ಸಿಎಂ-ಡಿಸಿಎಂ ಗೆ ಪತ್ರ ಬರೆಯುತ್ತೇನೆ ಎಂದು ಹೇಳಿದರು.
