Home » ಸ್ಯಾಂಡಲ್ ವುಡ್ ಹಿರಿಯ ನಟ ಅಶೋಕ್ ರಾವ್ ನಿಧನ

ಸ್ಯಾಂಡಲ್ ವುಡ್ ಹಿರಿಯ ನಟ ಅಶೋಕ್ ರಾವ್ ನಿಧನ

0 comments

ಬೆಂಗಳೂರು : ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟ ಅಶೋಕ್ ರಾವ್ ಇಂದು ನಿಧನರಾಗಿದ್ದಾರೆ‌. ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದಂತ ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ‌.

ಕನ್ನಡ ಸೇರಿದಂತೆ ಹಲವು ಚಿತ್ರಗಳಲ್ಲಿ ವಿಶಿಷ್ಟ ನಟನೆಯಿಂದ ನಟ ಅಶೋಕ್ ಗುರುತಿಸಿಕೊಂಡಿದ್ದರು. ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ವಿದ್ಯಾರಣ್ಯಪುರದ ನಿವಾಸದಲ್ಲಿ ಅಶೋಕ್ ರಾವ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

You may also like

Leave a Comment