Home » Dadasaheb Phalke Award 2024: ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಒಲಿದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

Dadasaheb Phalke Award 2024: ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಒಲಿದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

0 comments

Mithun Chakraborty: ಬಾಲಿವುಡ್‌ನ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರು ತಮ್ಮ ವೃತ್ತಿಜೀವನದಲ್ಲಿ ಹಲವಾರು ಉತ್ತಮ ಚಲನಚಿತ್ರಗಳನ್ನು ನೀಡಿದ್ದಾರೆ ಮತ್ತು ತಮ್ಮ ಬಲವಾದ ನಟನೆಯಿಂದ ಜನರ ಹೃದಯದಲ್ಲಿ ಸ್ಥಾನ ಪಡೆದಿದ್ದಾರೆ. 74 ವರ್ಷದ ನಟನಿಗೆ ಈಗ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ವಿಷಯ ಪ್ರಕಟ ಮಾಡಿದ್ದಾರೆ.

ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. “ಮಿಥುನ್ ದಾ ಅವರ ಗಮನಾರ್ಹ ಸಿನಿಮೀಯ ಪ್ರಯಾಣವು ಪ್ರತಿ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ!. “ಭಾರತೀಯ ಚಿತ್ರರಂಗಕ್ಕೆ ನೀಡಿದ ವಿಶಿಷ್ಟ ಕೊಡುಗೆಗಾಗಿ ಶ್ರೇಷ್ಠ ನಟ ಶ್ರೀ ಮಿಥುನ್ ಚಕ್ರವರ್ತಿ ಅವರಿಗೆ ಪ್ರಶಸ್ತಿಯನ್ನು ನೀಡಲು ದಾದಾಸಾಹೇಬ್ ಫಾಲ್ಕೆ ಆಯ್ಕೆ ತೀರ್ಪುಗಾರರು ನಿರ್ಧರಿಸಿದ್ದಾರೆ ಎಂದು ಘೋಷಿಸಲು ನನಗೆ ಗೌರವವಿದೆ.” ಎಂದು ಸಚಿವ ಅಶ್ವಿನಿ ವೈಷ್ಣವ್‌ ಅವರು ಬರೆದಿದ್ದಾರೆ.

8 ಅಕ್ಟೋಬರ್ 2024 ರಂದು 70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಿಥುನ್ ಚಕ್ರವರ್ತಿ ಅವರಿಗೆ ಈ ಗೌರವವನ್ನು ನೀಡಲಾಗುವುದು. ಇದಕ್ಕೂ ಮುನ್ನ ಮಿಥುನ್ ಚಕ್ರವರ್ತಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

https://twitter.com/AshwiniVaishnaw/status/1840609074041225415

 

You may also like

Leave a Comment