2
Sweets: ಸಿಹಿ ತಿಂಡಿಗಳಿಗೆ (Sweets) ಬಳಸುವ ಕೋವಾದಲ್ಲಿ ಕೂಡ ಕಲಬೆರಕೆ ಪತ್ತೆಯಾಗಿರುವುದಾಗಿ ಆಹಾರ ಇಲಾಖೆಯ ಪರೀಕ್ಷೆಯ ವರದಿ ತಿಳಿಸಿದೆ.
ಇಡ್ಲಿ, ಗೋಬಿ ಸೇರಿದಂತೆ ಅನೇಕ ಆಹಾರಗಳಲ್ಲಿ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆಯಾದ ಬೆನ್ನಲ್ಲೇ ಆಹಾರ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿತ್ತು. ಜತೆಗೆ, ಆಹಾರಗಳ ತಯಾರಿ ಹಾಗೂ ಮಾರಾಟ ಸಂಬಂಧ ಕೆಲವೊಂದು ಕಠಿಣ ನಿಯಮಗಳನ್ನು ಜಾರಿ ಮಾಡಿತ್ತು. ಆ ನಂತರ ಕುಡಿಯುವ ನೀರು ಸುರಕ್ಷಿತವೇ ಎಂಬ ಬಗ್ಗೆ ಪರಿಶೀಲನೆಗೆ ಮುಂದಾಗಿತ್ತು. ಇದೀಗ ಪರೀಕ್ಷಾ ವರದಿ ಬಂದಿದ್ದು, ಆಘಾತಕಾರಿ ವಿಚಾರ ಬಯಲಾಗಿದೆ. ಈ ಬಗ್ಗೆ ಸರ್ಕಾರ ಇನ್ನೇನು ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.
