1
Ramalinga Reddy: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಇದೀಗ ಸರಕಾರದ ಮಾರ್ಗಸೂಚಿಯಂತೆ ಬಸ್‌ಗಳಲ್ಲಿ ಮಾಸ್ಕ್ ಧರಿಸಿ ಪ್ರಯಾಣಿಸಲು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚಿಸಿದ್ದಾರೆ.
ಕೋವಿಡ್ ಮುಂಜಾಗೃತಾ ಕ್ರಮವಾಗಿ ಪ್ರತಿಯೊಬ್ಬ ಪ್ರಯಾಣಿಕರು ಮಾಸ್ಕ್ ಧರಿಸಿ ಪ್ರಯಾಣ ಮಾಡಬೇಕೆಂದು ಸಚಿವರು ಸಲಹೆ ನೀಡಿದ್ದಾರೆ.
ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿದ್ದು, ಕೇರಳದಿಂದ ಬರುವ ಹಾಗೂ ಹೋಗುವ ಬಸ್‌ಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸುವಂತೆ ಸೂಚಿಸಲಾಗಿದೆ ಎಂದು ಹೇಳಲಾಗಿದೆ.
