Home » Permanent Disability: ಹಲ್ಲು ನೋವಿಗೆ ಚಿಕಿತ್ಸೆ ಪಡೆದಿದಕ್ಕೆ ಅಂಗವೈಕಲ್ಯ- ಡಾಕ್ಟರ್ ಜೇಬಿಗೆ ಬಿತ್ತು 9 ಲಕ್ಷ ಕತ್ತರಿ

Permanent Disability: ಹಲ್ಲು ನೋವಿಗೆ ಚಿಕಿತ್ಸೆ ಪಡೆದಿದಕ್ಕೆ ಅಂಗವೈಕಲ್ಯ- ಡಾಕ್ಟರ್ ಜೇಬಿಗೆ ಬಿತ್ತು 9 ಲಕ್ಷ ಕತ್ತರಿ

1 comment
Permanent Disability

Permanent Disability: ಹಲ್ಲು ನೋವಿಗೆ ಚಿಕಿತ್ಸೆ ಪಡೆದುಕೊಂಡ ಮಹಿಳೆಯೊಬ್ಬರು ವೈದ್ಯರ ನಿರ್ಲಕ್ಷ್ಯದಿಂದಾಗಿ ಶಾಶ್ವತ ಅಂಗವೈಕಲ್ಯಕ್ಕೆ ಒಳಗಾದ ಘಟನೆ ನಡೆದಿದೆ. ದಂತ ವೈದ್ಯರ ನಿರ್ಲಕ್ಷ್ಯ ಧೋರಣೆಗೆ ಜಿಲ್ಲಾ ಗ್ರಾಹಕರ ನ್ಯಾಯಾಲಯದ ವೈದ್ಯನಿಗೆ 9 ಲಕ್ಷ ದಂಡ ವಿಧಿಸಿದೆ.

ಚಾಮರಾಜನಗರದ ರಥದ ಬೀದಿಯಲ್ಲಿರುವ ಲೇಟ್ ಕೆ.ಬಿ. ಸುಂದರ್ ಅವರ ಪತ್ನಿ ಸುಕನ್ಯಾ ಅವರು 2021ರ ಫೆಬ್ರವರಿ 3 ರಂದು ನಗರದ ಆಗ್ರಹಾರ ಬೀದಿಯಲ್ಲಿರುವ ಗಿರಿಜಾ ಡೆಂಟಲ್ ಕೇರ್ ನ (Dental Clinic)ವೈದ್ಯ ಡಾ. ಮಂಜುನಾಥ್ ಅವರಿಗೆ ಹಲ್ಲುನೋವಿನ ಚಿಕಿತ್ಸೆ ಪಡೆಯಲು ತೆರಳಿದ್ದರು. ಈ ಸಂದರ್ಭ ಡಾ. ಮಂಜುನಾಥ್‍ ಅವರು ಯಾವುದೇ ರೀತಿಯ ಮುಂಜಾಗ್ರತಾ ಕ್ರಮವಾಗಿ ಪ್ರಾಥಮಿಕ ಹಂತದ ಪರೀಕ್ಷೆ ಮಾಡದೇ ಏಕಾಏಕಿ ದವಡೆಗೆ ಅನಸ್ಥೇಷಿಯಾ ನೀಡಿದ್ದು, ಹೀಗಾಗಿ, ಸುಕನ್ಯಾ ಅವರು ತೀವ್ರ ನಿತ್ರಾಣಗೊಂಡು ಕುಸಿದು ಬಿದ್ದಿದ್ದರು. ವೈದ್ಯ ಮಂಜುನಾಥ್ ಹತ್ತಿರದಲ್ಲಿಯೇ ಇದ್ದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕಳುಹಿಸದೆ ದೂರದ ಮರಿಯಾಲದ ಬಳಿ ಇದ್ದ ಬಸವರಾಜೇಂದ್ರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆ ವೈದ್ಯರ ಸೂಚನೆಯ ಅನುಸಾರ ಮೈಸೂರಿನ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೀಗಾಗಿ, ಒಂದು ವಾರದವರೆಗೆ ಸುಕನ್ಯಾ ಅವರಿಗೆ ಲಕ್ಷಾಂತರ ರೂ.ಗಳನ್ನು ಖರ್ಚು ಮಾಡಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿದೆ.

ಸುಕನ್ಯಾ ಅವರ ಮಗ ರವಿಕುಮಾರ್ ಅವರು ವೈದ್ಯರು ತೋರಿದ ನಿರ್ಲಕ್ಷ್ಯದ ಪರಿಣಾಮ ಸುಕನ್ಯಾ ಅವರಿಗೆ ಈ ಪರಿಸ್ಥಿತಿ ಎದುರಾಗಿದೆ ಎಂದು ವೈದ್ಯಕೀಯ ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ದೂರು ನೀಡಿದ್ದರು. ಆದರೂ ಏನೂ ಪ್ರಯೋಜನವಾಗದ ಹಿನ್ನೆಲೆ ಒಂದು ವರ್ಷಗಳ ಕಾಲ ಚಿಕಿತ್ಸೆ ಪಡೆದುಕೊಂಡು ಆ ಬಳಿಕ ಜಿಲ್ಲಾ ಗ್ರಾಹಕರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು.ಚಾಮರಾಜನಗರದ ನಿವಾಸಿ ಸುಕನ್ಯಾ ಎಂಬಾಕೆ ಚಿಕಿತ್ಸೆ ಪಡೆದು ಅಂಗವೈಕಲ್ಯಕ್ಕೆ ಒಳಗಾದ ಮಹಿಳೆಯಾಗಿದ್ದು, ಚಾಮರಾಜನಗರ ಗ್ರಾಹಕರ ನ್ಯಾಯಾಲಯದ ನ್ಯಾ. ಎಂ.ವಿ. ಭಾರತಿ ಹಾಗೂ ಸದಸ್ಯರಾದ ಕೆ.ಎಸ್. ರಾಜು ಅವರಿದ್ದ ಪೀಠ ಈ ಪ್ರಕರಣದ ವಿಚಾರಣೆ ನಡೆಸಿ ಗಿರಿಜಾ ಡೆಂಟಲ್ ಕೇರ್ ನ ದಂತ ವೈದ್ಯ ಮಂಜುನಾಥ್‍ ಅವರಿಗೆ ದಂಡ ವಿಧಿಸಿದೆ.

ವೈದ್ಯರ ಸೇವಾ ನ್ಯೂನತೆ ಮತ್ತು ಚಿಕಿತ್ಸೆ ನೀಡುವ ಸಂದರ್ಭ ಬೇಜವಾಬ್ದಾರಿ ಧೋರಣೆ ತೋರಿದ್ದು, ವಿಚಾರಣೆ ಹಾಗೂ ವೈದ್ಯಕೀಯ ದಾಖಲೆ ಮೂಲಕ. ದೃಢಪಟ್ಟಿದೆ. ಇದರ ಜೊತೆಗೆ ರೋಗಿಗೆ ಪ್ರಾಥಮಿಕ ಹಂತದ ಪರೀಕ್ಷೆಗಳನ್ನು ನಡೆಸದೇ ನೇರವಾಗಿ ಇಂಜೆಕ್ಷನ್ ನೀಡಿರುವುದು ಬೆಳಕಿಗೆ ಬಂದಿದೆ. ಹೀಗಾಗಿ, ಜಿಲ್ಲಾ ಗ್ರಾಹಕರ ನ್ಯಾಯಲಯವು ಚಾಮರಾಜನಗರದ ಗಿರಿಜಾ ಡೆಂಟಲ್ ಕೇರ್ ನ ದಂತ ವೈದ್ಯ ಮಂಜುನಾಥ್‍ ಅವರಿಗೆ 9,24,605 ರೂ.ಗಳನ್ನು ದಂಡದ ರೂಪದಲ್ಲಿ ಪರಿಹಾರ ನೀಡುವಂತೆ ಆದೇಶ ನೀಡಿದೆ. ಸುಕನ್ಯಾ ಅವರಿಗೆ ವೈದ್ಯಕೀಯ ವೆಚ್ಚ 6,14,605 ರೂ. ಹಾಗೂ 3 ಲಕ್ಷ ರೂ. ಪರಿಹಾರ ಮತ್ತು 10 ಸಾವಿರ ದಂಡ ಸೇರಿ 9,24,605 ರೂ.ಗಳನ್ನು 30 ದಿನಗಳಲ್ಲಿ ಪಾವತಿ ಮಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

 

ಇದನ್ನು ಓದಿ: ಮತ್ತೊಂದು ಅಸಹಜ ಸಾವು ಶಂಕೆ ! ಕಬ್ಬಿಣದ ಕಡಾಯಿಯಲ್ಲಿತ್ತು ಶವ – ರೈಸ್ ಆಯಿಲ್ ಫ್ಲೋರ್ ಮಿಲ್ಸ್ ಕಾರ್ಮಿಕ ಕೃಷ್ಣಪ್ಪ ಸಫಲ್ಯ ಅನುಮಾನಾಸ್ಪದ ಸಾವು !

 

 

You may also like

Leave a Comment