Home » KSRTC: ರಾಜ್ಯದ ‘ಸಾರಿಗೆ ಇಲಾಖೆ’ಯ ಮಹಿಳಾ ನೌಕರರಿಗೂ ಜ.1ರಿಂದ ‘ಋತುಚಕ್ರ ರಜೆ’ : ‘KSRTC’ ಅಧಿಕೃತ ಆದೇಶ

KSRTC: ರಾಜ್ಯದ ‘ಸಾರಿಗೆ ಇಲಾಖೆ’ಯ ಮಹಿಳಾ ನೌಕರರಿಗೂ ಜ.1ರಿಂದ ‘ಋತುಚಕ್ರ ರಜೆ’ : ‘KSRTC’ ಅಧಿಕೃತ ಆದೇಶ

0 comments
KSRTC

KSRTC: ಸಾರಿಗೆ ಇಲಾಖೆಯ ಮಹಿಳಾ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ ಋತುಚಕ್ರ ರಜೆಯನ್ನು ನೀಡಿ ಅಧಿಕೃತ ಆದೇಶವನ್ನು ಕೆ ಎಸ್ ಆರ್ ಟಿ ಸಿ ಹೊರಡಿಸಿದೆ.

ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ಕರ್ನಾಟಕ ಸರ್ಕಾರವು ಉಲ್ಲೇಖಿತ ಸರ್ಕಾರದ ಆದೇಶಗಳಲ್ಲಿ ಮಹಿಳಾ ನೌಕರರ ಮನೋಸ್ಥೆರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ ಸೌಲಭ್ಯವನ್ನು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೂ ಕಲ್ಪಿಸಿ ಷರತ್ತು ಮತ್ತು ನಿಬಂಧನೆಗೊಳಪಟ್ಟು ರಜೆ ಮಂಜೂರು ಮಾಡಲು ಆದೇಶಿಸಿರುತ್ತದೆ ಎಂದಿದ್ದಾರೆ.

ಸದರಿ ಆದೇಶವನ್ನು ನಿಗಮದಲ್ಲಿ ಅಳವಡಿಸಿಕೊಂಡಿದ್ದು, ಅದರಂತೆ ನಿಗಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ದಿನಾಂಕ: 01.01.2026 ರಿಂದ ಜಾರಿಗೆ ಬರುವಂತೆ ಪ್ರತಿ ತಿಂಗಳು ಒಂದು ದಿನದಂತೆ ಋತುಚಕ್ರ ರಜೆಯ ಸೌಲಭ್ಯವನ್ನು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಮಂಜೂರು ಮಾಡುವುದು ಎಂದು ಹೇಳಿದ್ದಾರೆ.

1. ಋತುಚಕ್ರ ಹೊಂದಿರುವ, 18 ರಿಂದ 52 ವಯಸ್ಸಿನ ನಿಗಮದ ಮಹಿಳಾ ನೌಕರರು ಈ ರಜೆಯನ್ನು ಪಡೆಯಲು ಅರ್ಹರಿರುತ್ತಾರೆ ಎಂದು ಹೇಳಿದ್ದಾರೆ.

2. ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಸಕ್ಷಮವಾದ ಪ್ರಾಧಿಕಾರಿಯು ಋತುಚಕ್ರ ರಜೆ ಮಂಜೂರು ಮಾಡಬಹುದು. ಈ ರಜೆಯನ್ನು ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

3. ಈ ರಜೆಯನ್ನು ರಜೆ/ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸತಕ್ಕದ್ದು.

4. ಋತುಚಕ್ರ ರಜೆಯನ್ನು ಬೇರೆ ಯಾವುದೇ ರಜೆಯೊಂದಿಗೆ ಸಂಯೋಜಿಸತಕ್ಕದ್ದಲ್ಲ. ಸದರಿ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು ಹಾಗೂ ಮುಂದಿನ ತಿಂಗಳಿಗೆ ವಿಸ್ತರಿಸಲು (carry over) ಅವಕಾಶವಿರುವುದಿಲ್ಲ.

ಈ ಸಂಬಂಧಪಟ್ಟವರೆಲ್ಲರೂ ಮೇಲಿನ ಆದೇಶವನ್ನು ಮನದಟ್ಟು ಮಾಡಿಕೊಂಡು ಅದರಂತೆ ಕ್ರಮ ಕೈಗೊಳ್ಳುವಂತೆ ಸಾರಿಗೆ ನಿಗಮಗಳಿಗೆ ಆದೇಶದಲ್ಲಿ ಸೂಚಿಸಿದ್ದಾರೆ.

You may also like