Home » MLA Yashpal Suvarna:ಅಯೋಧ್ಯೆ ರಾಮಮಂದಿರ ಉದ್ಘಾಟನೆಯ ಆಚರಣೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯಗೆ ವಿಶೇಷ ಮನವಿ ಇಟ್ಟ ಯಶ್‌ಪಾಲ್‌ ಸುವರ್ಣ !!

MLA Yashpal Suvarna:ಅಯೋಧ್ಯೆ ರಾಮಮಂದಿರ ಉದ್ಘಾಟನೆಯ ಆಚರಣೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯಗೆ ವಿಶೇಷ ಮನವಿ ಇಟ್ಟ ಯಶ್‌ಪಾಲ್‌ ಸುವರ್ಣ !!

1 comment

Ram Mandir: ಅಯೋಧ್ಯೆ ರಾಮ ಮಂದಿರದಲ್ಲಿ (Ram Mandir) ಜನವರಿ 22 ರಂದು ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆಯನ್ನು (Pran Prathistha) ಪ್ರಧಾನಿ ಮೋದಿ (PM Narendra Modi) ನೆರವೇರಿಸಲಿದ್ದಾರೆ.

 

ಇಡೀ ದೇಶವೇ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯ ಲೋಕಾರ್ಪಣೆಯ ಭಾವನಾತ್ಮಕ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕಾತುರದಿಂದ ಎದುರು ನೋಡುತ್ತಿದೆ. ಈ ನಡುವೆ, ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣರವರು, ರಾಮ ಮಂದಿರಕ್ಕೆ ಹೋಗಿಬರಲು ಮತ್ತು ಎಲ್ಲರೂ ರಾಮ ಮಂದಿರ ಉದ್ಘಾಟನೆ ದಿನವನ್ನು ಹಬ್ಬವಾಗಿ ಆಚರಣೆ ಮಾಡಲು ನೆರವಾಗುವ ನಿಟ್ಟಿನಲ್ಲಿ ಜ.22 ರಂದು ಸಾರ್ವತ್ರಿಕ ರಜಾ ದಿನವೆಂದು ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಒಂದೇ ವರ್ಷಕ್ಕೆ ಬರೋಬ್ಬರಿ 9940 ಕಾಂಡೋಮ್ ಆರ್ಡರ್ ಮಾಡಿದ ಗ್ರಾಹಕ!!

ಈ ಕುರಿತು ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣರವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಜನವರಿ 22ರಂದು ಕೋಟ್ಯಂತರ ಭಾರತೀಯರ ಶತಮಾನಗಳ ಕನಸು ನನಸಾಗುತ್ತಿದೆ. ಶ್ರೀರಾಮ ಮಂದಿರದ ಲೋಕಾರ್ಪಣೆಯು ಭಕ್ತರ ಭಾವನಾತ್ಮಕ ಮತ್ತು ಧಾರ್ಮಿಕತೆಯ ಐತಿಹಾಸಿಕ ಕ್ಷಣವಾಗಿ ಇತಿಹಾಸದ ಪುಟಗಳಲ್ಲಿ ದಾಖಲಾಗಲಿದೆ. ಕೋಟ್ಯಂತರ ಶ್ರೀರಾಮ ಭಕ್ತರು ಈ ಪೂಜ್ಯ ದಿನವನ್ನು ದೇಶಾದ್ಯಂತ ದೇವಸ್ಥಾನ, ಮಂದಿರ, ಸಂಘ ಸಂಸ್ತೆಗಳು ಮತ್ತು ಮನೆ ಮನಗಳಲ್ಲಿ ರಾಮ ಜ್ಯೋತಿ ಬೆಳಗಿಸುವ ಮೂಲಕ ವಿಶೇಷ ಪೂಜೆಗಳು, ಭಜನಾ ಸಂಕೀರ್ತನೆಗಳು ಹಾಗೂ ಅನ್ನ ಸಂತರ್ಪಣೆಗಳ ಮೂಲಕ ಅತ್ಯಂತ ಸಂಭ್ರಮ ಸಡಗರದಿಂದ ದೀಪಾವಳಿಯ ಹಬ್ಬದಂತೆ ಆಚರಿಸಲು ಬಯಸುತ್ತಾರೆ.

ಈ ನಿಟ್ಟಿನಲ್ಲಿ ರಾಮಮಂದಿರ ಲೋಕಾರ್ಪಣೆಯ ದಿನದಂದು ಶ್ರೀರಾಮ ದೇವರ ಸೇವೆಯಲ್ಲಿ ಪಾಲ್ಗೊಂಡು ಮತ್ತು ದೇವರ ಕೃಪೆಗೆ ಪಾತ್ರರಾಗಲು ಅಯೋಧ್ಯೆ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮದ ಸಲುವಾಗಿ 22/01.2024ರ ಸೋಮವಾರ ಶಾಲಾ, ಕಾಲೇಜು, ಸರ್ಕಾರಿ ಕಚೇರಿ ಮತ್ತು ಬ್ಯಾಂಕ್‌ ಮತ್ತಿತರ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ.

You may also like

Leave a Comment