Home » 4 ವರ್ಷದ ಬಾಲಕಿಯ ಮೇಲೆ 9 ವರ್ಷದ ಬಾಲಕನಿಂದ ಲೈಂಗಿಕ ದೌರ್ಜನ್ಯ!

4 ವರ್ಷದ ಬಾಲಕಿಯ ಮೇಲೆ 9 ವರ್ಷದ ಬಾಲಕನಿಂದ ಲೈಂಗಿಕ ದೌರ್ಜನ್ಯ!

by Mallika
0 comments

ಮುಂಬೈ : ನಾಲ್ಕೂವರೆ ವರ್ಷದ ಬಾಲಕಿಯ ಮೇಲೆ 9 ವರ್ಷದ ಬಾಲಕನೋರ್ವ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆಯೊಂದು ಮಹಾರಾಷ್ಟ್ರದ ಉಲ್ಲಾಸನಗರದಲ್ಲಿ ನಡೆದಿದೆ.

ಏಪ್ರಿಲ್ 3 ರಂದು ಈ ಘಟನೆ ನಡೆದಿದ್ದು, ಈ ಸಂಬಂಧ ಥಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆರೆಮನೆಯಲ್ಲಿ ವಾಸವಾಗಿದ್ದ ಬಾಲಕನೇ ಈ ಕೃತ್ಯ ಎಸಗಿದ್ದ.

ಆಟವಾಡುವ ನೆಪದಲ್ಲಿ ಬಾಲಕಿಯನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಬಾಲಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆಯ ತಾಯಿ ದೂರು ಪೊಲೀಸರಿಗೆ ನೀಡಿದ್ದಾರೆ.

ಬಾಲಕಿ ತನ್ನ ಖಾಸಗಿ ಅಂಗಗಳಲ್ಲಿ ನೋವಾಗುತ್ತಿರುವ ಬಗ್ಗೆ ತಾಯಿ ಬಳಿ ಹಂಚಿಕೊಂಡ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

ಇದೀಗ ಬಾಲಕನ ವಿರುದ್ಧ ವಿಠಲವಾಡಿ ಪೊಲೀಸ್ ಠಾಣೆಯ ಪೊಲೀಸರು ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸ್) ಕಾಯ್ದೆ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

You may also like

Leave a Comment