Home » Iran : ಮೈಮೇಲಿದ್ದ ಬಟ್ಟೆ ಬಿಚ್ಚಿ ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸಿದ ಯುವತಿ – ವಿಡಿಯೋ ವೈರಲ್, ಇಸ್ಲಾಂ ರಾಷ್ಟ್ರಗಳಲ್ಲಿ ಸಂಚಲನ

Iran : ಮೈಮೇಲಿದ್ದ ಬಟ್ಟೆ ಬಿಚ್ಚಿ ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸಿದ ಯುವತಿ – ವಿಡಿಯೋ ವೈರಲ್, ಇಸ್ಲಾಂ ರಾಷ್ಟ್ರಗಳಲ್ಲಿ ಸಂಚಲನ

0 comments

Iran : ಯುವತಿಯೊಬ್ಬಳು ಹಿಜಾಬ್(Hijaab) ವಿರೋಧಿಸಿ ತನ್ನ ಮೈಮೇಲಿದ್ದ ಬಟ್ಟೆಗಳನ್ನು ತೆಗೆದು ಎಸೆದ ಘಟನೆಯೊಂದು ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೆ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹೌದು, ಅನೇಕ ದೇಶಗಳಲ್ಲಿ ಹಿಜಾಬ್‌ಗೆ ವಿರೋಧ ವ್ಯಕ್ತವಾಗಿದೆ. ಅಂತೆಯೇ ಇರಾನ್‌ನ ಕೂಡ. ಇರಾನ್(Iran) ನಲ್ಲಿ ಮಹಿಳೆಯರು ಹಿಜಾಬ್ ಧರಿಸುವುದು ಕಡ್ಡಾಯವಾಗಿದೆ. ಆದ್ರೂ ಇರಾನ್‌ನಲ್ಲಿ ಮಹಿಳೆಯರು ಹಿಜಾಬ್ ಧರಿಸುವುದನ್ನು ಬಹಳ ಹಿಂದಿನಿಂದಲೂ ವಿರೋಧಿಸಿಕೊಂಡು ಬಂದಿದ್ದಾರೆ.

ಆದರೀಗ ಇರಾನ್‌ನ ಇಸ್ಲಾಮಿಕ್ ಆಜಾದ್ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಹುಡುಗಿಯೊಬ್ಬಳು ಹಿಜಾಬ್ ವಿರುದ್ಧ ತನ್ನ ಬಟ್ಟೆ ತೆಗೆದು ಅರೆ ಬೆತ್ತಲೆಯಲ್ಲಿ ಕುಳಿತು ಪ್ರತಿಭಟಿಸಿದ್ದಾಳೆ. ಈ ವೀಡಿಯೋ ಇಸ್ಲಾಮಿಕ್ ದೇಶಗಳು ಸೇರಿದಂತೆ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ಆನ್‌ಲೈನ್ ವರದಿಗಳ ಪ್ರಕಾರ ಈ ವೀಡಿಯೊ ಶನಿವಾರದಿಂದ ಸಾಕಷ್ಟು ವೈರಲ್ ಆಗಿದೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕಾಡ್ಗಿಚ್ಚಿನಂತೆ ಹಬ್ಬಿದೆ.

ವಿಡಿಯೋದಲ್ಲಿ ಏನಿದೆ?
ವಿಡಿಯೋದಲ್ಲಿ ಹುಡುಗಿಯೊಬ್ಬಳು ಅರೆನಗ್ನ ಸ್ಥಿತಿಯಲ್ಲಿ ವಿಶ್ವವಿದ್ಯಾಲಯದ ಗೋಡೆಯ ಮೇಲೆ ಕುಳಿತಿರುವುದನ್ನು ಸ್ಪಷ್ಟವಾಗಿ ಕಾಣಬಹುದು. ದೇಶದಲ್ಲಿ ಕಟ್ಟುನಿಟ್ಟಾಗಿ ಅನುಸರಿಸುವ ಇಸ್ಲಾಮಿಕ್ ಡ್ರೆಸ್ ಕೋಡ್ ವಿರುದ್ಧ ಪ್ರತಿಭಟಿಸುವಲ್ಲಿ ಈ ಹುಡುಗಿ ಅರೆಬೆತ್ತಲೆಯಾಗಿ ಕುಳಿತಿದ್ದಾಳೆ. ಪ್ರತಿಭಟನೆ ನಡೆಸುತ್ತಿದ್ದ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

You may also like

Leave a Comment