Home » ಕಾಬೂಲ್‌ನ ಶಿಕ್ಷಣ ಕೇಂದ್ರದಲ್ಲಿ ಆತ್ಮಹತ್ಯಾ ಬಾಂಬ್ ದಾಳಿ | 19 ಮಂದಿ ಮೃತ್ಯು

ಕಾಬೂಲ್‌ನ ಶಿಕ್ಷಣ ಕೇಂದ್ರದಲ್ಲಿ ಆತ್ಮಹತ್ಯಾ ಬಾಂಬ್ ದಾಳಿ | 19 ಮಂದಿ ಮೃತ್ಯು

by Mallika
1 comment

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನ ಶಿಕ್ಷಣ ಕೇಂದ್ರದಲ್ಲಿ ಆತ್ಮಾಹತ್ಯಾ ಬಾಂಬ್ ದಾಳಿ ನಡೆದಿದ್ದು, 19 ಮಂದಿ ಮೃತಪಟ್ಟಿದ್ದಾರೆ.

ಕಾಬೂಲ್‌ನ ಶಿಕ್ಷಣ ಕೇಂದ್ರದಲ್ಲಿ ನಡೆದ ದಾಳಿಯಲ್ಲಿ 21 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕಾಬೂಲ್ ಪೊಲೀಸ್ ಮುಖ್ಯಸ್ಥರ ವಕ್ತಾರ ಖಾಲಿದ್ ಜದ್ರಾನ್ ಹೇಳಿದ್ದಾರೆ.

ಶಿಕ್ಷಣ ಸಂಸ್ಥೆಯೊಳಗೆ ಸ್ಫೋಟ ಸಂಭವಿಸಿದ್ದು, 19 ಮಂದಿ ಮೃತಪಟ್ಟಿದ್ದಾರೆ. ದಾಳಿಯಲ್ಲಿ ಅಮಾಯಕರು ಪ್ರಾಣಬಿಟ್ಟಿರುವುದಕ್ಕೆ ಸಂತಾಪ ಸೂಚಿಸುತ್ತೇವೆ ಎಂದು ಖಾಲಿದ್ ಹೇಳಿದ್ದಾರೆ.

You may also like

Leave a Comment